ADVERTISEMENT

ವೀರ ಸೇನಾನಿಗಳ ಕಷ್ಟಕ್ಕೆ ಸ್ಪಂದಿಸಿ, ಹುತಾತ್ಮರನ್ನು ಸ್ಮರಿಸಿ: ಕೆ.ಸಿ.ಕಾರ್ಯಪ್ಪ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2023, 3:05 IST
Last Updated 8 ಡಿಸೆಂಬರ್ 2023, 3:05 IST
ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಯುದ್ಧ ಸ್ಮಾರಕಕ್ಕೆ ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್‍ಸಿಂಗ್ ಅವರು ಪುಷ್ಪನಮನ ಸಲ್ಲಿಸಿದರು
ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಯುದ್ಧ ಸ್ಮಾರಕಕ್ಕೆ ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್‍ಸಿಂಗ್ ಅವರು ಪುಷ್ಪನಮನ ಸಲ್ಲಿಸಿದರು   

ಮಡಿಕೇರಿ: ವೀರ ಸೇನಾನಿಗಳ ಕಷ್ಟಕ್ಕೆ ಸ್ಪಂದಿಸಬೇಕು ಹಾಗೂ ಹುತಾತ್ಮ ಯೋಧರನ್ನು ಸದಾ ಸ್ಮರಿಸಬೇಕು ಎಂದು ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ ತಿಳಿಸಿದರು.

ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇಲ್ಲಿನ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ರಾಷ್ಟ್ರದ ಗಡಿ ಪ್ರದೇಶದಲ್ಲಿ ಹಗಲಿರುಳು ಶ್ರಮಿಸುವ ವೀರ ಯೋಧರ ಧೈರ್ಯ ಹಾಗೂ ಸಾಹಸವನ್ನು ಪ್ರತಿಯೊಬ್ಬರೂ ಪ್ರಶಂಸಿಸಬೇಕು ಎಂದು ಹೇಳಿದರು.

ADVERTISEMENT

ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್‍ಸಿಂಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎನ್‍ಸಿಸಿ ಅಧಿಕಾರಿ ಕರ್ನಲ್ ಜೆಫಿರಿನ್ ಅರಾನ್ಹಾ, ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಏರ್ ಕಮಾಂಡರ್ (ನಿವೃತ್ತ) ಕಂಬಿರಂಡ ದೇವಯ್ಯ, ಲೆಫ್ಟಿನೆಂಟ್ ಕರ್ನಲ್ (ನಿವೃತ್ತ) ಎಂ.ನಾಚಪ್ಪ, ಮೇಜರ್ (ನಿವೃತ್ತ) ಒ.ಎಸ್.ಚಿಂಗಪ್ಪ, ಮಡಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕುಟ್ಟಪ್ಪ, ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಿರೀಶ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯಂ, ಎ.ಪಿ.ಸುಬ್ಬಯ್ಯ, ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ, ಡಿವೈಎಸ್‌ಪಿ ಜಗದೀಶ್, ರೆಡ್‍ಕ್ರಾಸ್ ಜಿಲ್ಲಾ ಉಪಾಧ್ಯಕ್ಷ ಎಚ್.ಟಿ.ಅನಿಲ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ ರೈ ಸೇರಿದಂತೆ ಹಲವು ಮಂದಿ ಪುಷ್ಪನಮನ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿದರು.

ಪೊಲೀಸ್ ಇಲಾಖೆಯ ಎಆರ್‌ಎಸ್‍ಐ ಚೆನ್ನಕೇಶವ ಅವರು ಗೌರವ ವಂದನೆ ನಡೆಸಿಕೊಟ್ಟರು. ಪೊಲೀಸ್ ಬ್ಯಾಂಡ್ ನೇತೃತ್ವ ವಹಿಸಿದ್ದ ಸಿದ್ದೇಶ್ ತಂಡದವರು ಪೊಲೀಸ್ ವಾದ್ಯದೊಂದಿಗೆ ಗೌರವ ನಮನ ಸಲ್ಲಿಸಿದರು.

ಜಿಲ್ಲಾಡಳಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ಪೊಲೀಸರು ಗೌರವ ವಂದನೆ ಸಲ್ಲಿಸಿದರು
ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಎಆರ್‌ಎಸ್‍ಐ ಚೆನ್ನಕೇಶವ ಅವರಿಂದ ಗೌರವ ವಂದನೆ ಸಿದ್ದೇಶ್ ಮತ್ತು ತಂಡದವರಿಂದ ಪೊಲೀಸ್ ಬ್ಯಾಂಡ್ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.