ADVERTISEMENT

ಕುಪ್ಪಟ್ಟು- ಕೋಕೇರಿ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2024, 5:07 IST
Last Updated 7 ಅಕ್ಟೋಬರ್ 2024, 5:07 IST
ನಾಪೋಕ್ಲು ಸಮೀಪದ ಕೋಕೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿ ಮಾತನಾಡಿದರು
ನಾಪೋಕ್ಲು ಸಮೀಪದ ಕೋಕೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿ ಮಾತನಾಡಿದರು   

ನಾಪೋಕ್ಲು: ಇಲ್ಲಿಗೆ ಸಮೀಪದ ಕೋಕೇರಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

₹50 ಲಕ್ಷ ಅನುದಾನದಲ್ಲಿ ಕುಪ್ಪಟ್ಟು- ‌ಕೋಕೇರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ‘ಬಹಳ ದಿನಗಳಿಂದ ರಸ್ತೆ ದುರಸ್ತಿಗೆ ಸ್ಥಳೀಯರು ಕೋರಿಕೆ ಸಲ್ಲಿಸಿದ್ದು, ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು’ ಎಂದರು.

ಗ್ರಾಮಸ್ಥ ಚೇನಂಡ ಜಪ್ಪುದೇವಯ್ಯ ಮಾತನಾಡಿ, ‘ಗ್ರಾಮದ ರಸ್ತೆ ಹಲವು ದಿನಗಳಿಂದ ಅಭಿವೃದ್ಧಿ ಕಾಣದೆ ನನೆಗುದಿಗೆ ಬಿದ್ದಿದ್ದು, ಸಂಚಾರಕ್ಕೆ ತೊಡಕಾಗಿತ್ತು. ಈ ರಸ್ತೆಯಲ್ಲಿ ಶಾಲಾ ವಾಹನಗಳು ಸಂಚರಿಸುತ್ತಿವೆ. ಸದ್ಯಕ್ಕೆ ಖಾಸಗಿ ಬಸ್ ಒಂದು ಸಂಚರಿಸುತ್ತಿದೆ. ಗ್ರಾಮೀಣ ಜನರ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವುದು ಶ್ಲಾಘನೀಯ’ ಎಂದು ಹೇಳಿದರು.

ADVERTISEMENT

ಗ್ರಾಮಸ್ಥರಾದ ಚೇನ೦ಡ ಗಿರೀಶ್ ಪೂಣಚ್ಚ, ಚೇನ೦ಡ ತಮ್ಮಿ ತಮಯ್ಯ, ಚೆನಂಡ ನಂದ ಜಗದೀಶ್, ಚೇನ೦ಡ ಸುರೇಶ್ ನಾಣಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಪ್ರಮುಖರಾದ ಬಿದ್ದಾಟoಡ ತಮ್ಮಯ್ಯ, ಕುಲ್ಲೆಟಿರ ಅರುಣಬೇಬ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.