ADVERTISEMENT

ಕೊಡ್ಲಿಪೇಟೆ: ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜದ ಹಾರಾಟ

ಸಾರ್ವಜನಿಕರ ವ್ಯಾಪಕ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 3:13 IST
Last Updated 14 ಆಗಸ್ಟ್ 2022, 3:13 IST
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯಲ್ಲಿ ರಾಷ್ಟ್ರ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜವನ್ನು ಹಾರಿಸಲಾಗಿದೆ.
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಶನಿವಾರಸಂತೆ ಸಮೀಪದ ಕೊಡ್ಲಿಪೇಟೆಯಲ್ಲಿ ರಾಷ್ಟ್ರ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜವನ್ನು ಹಾರಿಸಲಾಗಿದೆ.   

ಶನಿವಾರಸಂತೆ: ಇಲ್ಲಿಗೆ ಸಮೀಪದ ಕೊಡ್ಲಿಪೇಟೆ ಬಸ್‌ ನಿಲ್ದಾಣದ ಬಳಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜವನ್ನು ಹಾರಿಸಲಾಗಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋಬಳಿ ಘಟಕದ ಕಾರ್ಯದರ್ಶಿ ಡಿ.ಆರ್.ವೇದಕುಮಾರ್, ‘ಇದು ಯಾವ ರಾಷ್ಟ್ರ ಪ್ರೇಮ? ಯಾವ ದೇಶ ಭಕ್ತಿ’ ಎಂದು ಪ್ರಶ್ನಿಸಿದ್ದಾರೆ.

‘ತಕ್ಷಣವೇ ಸ್ಥಳಕ್ಕೆ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೂವಯ್ಯ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.