ADVERTISEMENT

ನಾಪೋಕ್ಲು: ಅ.2ರಂದು ಹಗ್ಗಜಗ್ಗಾಟ, ತೆಂಗಿನಕಾಯಿಗೆ ಗುಂಡು ಒಡೆಯುವ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 14:11 IST
Last Updated 20 ಸೆಪ್ಟೆಂಬರ್ 2024, 14:11 IST

ನಾಪೋಕ್ಲು: ಕಟ್ಟೆಮಾಡು ಗ್ರಾಮದ ಗ್ರೀನ್ಸ್ ಯುವಕ ಸಂಘದಿಂದ ಗಾಂಧಿ ಜಯಂತಿ (ಅ.2) ಪ್ರಯುಕ್ತ ಮುಕ್ತ ಹಗ್ಗಜಗ್ಗಾಟ, ತೆಂಗಿನಕಾಯಿಗೆ ಗುಂಡು ಒಡೆಯುವ ಸ್ಪರ್ಧೆ ಮತ್ತು ಆಟೋಟ ಕಾರ್ಯಕ್ರಮ ಆಯೋಜಿಸಲಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ತೆಂಗಿನಕಾಯಿಗೆ ಗುಂಡು ಒಡೆಯುವ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆ ನಡೆಯಲಿವೆ.

ಪುರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹10 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ ₹6 ಸಾವಿರ ಮತ್ತು ಟ್ರೋಫಿ ವಿತರಿಸಲಾಗುವುದು. ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ₹6 ಸಾವಿರ ಮತ್ತು ಟ್ರೋಫಿ, ದ್ವಿತೀಯ ಬಹುಮಾನ ₹4 ಸಾವಿರ ನಗದು ಮತ್ತು ಟ್ರೋಫಿ ವಿತರಿಸಲಾಗುವುದು.

ADVERTISEMENT

‘ಸಾರ್ವಜನಿಕರಿಗೆ ತೆಂಗಿನಕಾಯಿಗೆ ಗುಂಡು ಒಡೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹7 ಸಾವಿರ ಮತ್ತು ಟ್ರೋಫಿ, ದ್ವಿತೀಯ ಬಹುಮಾನ ₹5 ಸಾವಿರ ನಗದು ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ ₹3 ಸಾವಿರ ನಗದು ಮತ್ತು ಟ್ರೋಫಿ ವಿತರಿಸಲಾಗುವುದು’ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.