ಸೋಮವಾರಪೇಟೆ: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಭೇದಿಗೆ ಉತ್ತರ ಕೊಡುವುದಿಲ್ಲ’ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.
‘1942ರ ಕ್ವಿಟ್ ಇಂಡಿಯಾ ಚಳವಳಿ ಸಂದರ್ಭಆರ್‌ಎಸ್‌ಎಸ್ ಒಳಗೊಳಗೇ ಬ್ರಿಟಿಷರಿಗೆ ಬೆಂಬಲ ನೀಡಿತ್ತು’ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು, ‘ಅದು ಟ್ವೀಟ್ ಅಲ್ಲ. ಅದೊಂದು ಬಗೆಯ ಭೇದಿ. ಆಧಾರ ಇಲ್ಲದ ಅವರ ಟ್ವೀಟ್‌ಗೆ ಉತ್ತರ ಕೊಡುವುದಿಲ್ಲ’ ಎಂದರು.
‘ಹಿಂದೆ ನರೇಂದ್ರ ಮೋದಿ ಅವರನ್ನು ಎಸ್‌ಐಟಿ 9 ಗಂಟೆಗಳ ಕಾಲ ವಿಚಾರಣೆ ಮಾಡಿತ್ತು. ಅಮಿತ್‌ಷಾ ಅವರನ್ನೂ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಸಿಲುಕಿಸಲು ಯತ್ನಿಸಿತ್ತು. ಈಗ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿ ಕೊಳ್ಳಲಾಗುತ್ತಿದೆ ಎಂದು ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ.ಭ್ರಷ್ಟಾಚಾರ ಪ್ರಜಾಪ್ರಭುತ್ವದ ಅಂಗವಾಗಿದೆ ಎಂದು ಕಾಂಗ್ರೆಸ್ ಪಕ್ಷ ಭಾವಿಸಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.