ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಗಳಿಗೆ ದಾಳಿ ಮಾಡಿ ಅಪಾರ ನಷ್ಟ ಉಂಟುಮಾಡಿವೆ.
ನೆಲಜಿ ಗ್ರಾಮದ ಮೊಣ್ಣಂಡ ಸೀತಮ್ಮ ಮತ್ತು ಅಪ್ಪಯ್ಯ ಅವರ ತೋಟದಲ್ಲಿ ಅಡ್ಡಾಡಿರುವ ಕಾಡಾನೆಗಳು ಬಾಳೆ, ಕಾಫಿ ಅಡಿಕೆ ಗಿಡಗಳನ್ನು ನಾಶಪಡಿಸಿವೆ. ಸುತ್ತಮುತ್ತಲ ಕಾಫಿ ಬೆಳೆಗಾರರ ತೋಟಗಳಿಗೂ ಹಾನಿಯಾಗಿದೆ. 3-4 ಕಾಡಾನೆಗಳ ಹಿಂಡು ಗ್ರಾಮದಲ್ಲಿ ಅಡ್ಡಾಡುತ್ತಿದ್ದು ನಷ್ಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಡಾನೆಗಳು ಗ್ರಾಮದಲ್ಲಿ ಅಡ್ಡಾಡುತ್ತಿದ್ದು ಸಮಸ್ಯೆ ಸೃಷ್ಟಿಸುತ್ತಿವೆ. ಕಾಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.