ADVERTISEMENT

ಗಮನ ಸೆಳೆದ ವಿದ್ಯಾರ್ಥಿಗಳ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2024, 4:35 IST
Last Updated 1 ಜೂನ್ 2024, 4:35 IST
ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಹೂವು ನೀಡಿ ಶಾಲೆಗೆ ಸ್ವಾಗತಿಸಿದರು
ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಹೂವು ನೀಡಿ ಶಾಲೆಗೆ ಸ್ವಾಗತಿಸಿದರು   

ಸುಂಟಿಕೊಪ್ಪ: ಸುಂಟಿಕೊಪ್ಪದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡರು.

ಮೊದಲ ದಿನ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಶಾಲೆಯ ಮುಖ್ಯ ದ್ವಾರದಲ್ಲಿ ಹೂವನ್ನು ನೀಡಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ನಂತರ ಶಾಲೆಯ ಹಿರಿಯ ವಿದ್ಯಾರ್ಥಿಗಳು ವಾದ್ಯಗೋಷ್ಠಿ ಮೂಲಕ ಮೆರವಣಿಗೆ ಮೂಲಕ ಶಾಲೆಯವರೆಗೆ ಕರೆದುಕೊಂಡು ಬಂದರು.
ಆಗಮಿಸಿದ ಎಲ್ಲ ಮಕ್ಕಳಿಗೆ ಸಿಹಿ ವಿತರಿಸಿ ಸ್ವಾಗತಿಸಲಾಯಿತು.

ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಬಾಳೆ ಕಂಬ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಶಾಲೆಯ ಮುಖ್ಯ ದ್ವಾರದಿಂದ‌ ಪ್ರೀತಿಯ ಅಪ್ಪುಗೆಯೊಂದಿಗೆ ಹೂವು ನೀಡಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ನಂತರ ಸಿಹಿ ವಿತರಿಸಿ ಮಕ್ಕಳೊಂದಿಗೆ ಸಂಭ್ರಮಿಸಿದರು. ನಂತರ ಮಧ್ಯಾಹ್ನ ಅನ್ನ, ಸಾಂಬರ್ ಹಾಗೂ ಕೇಸರಿ ಬಾತ್ ನೀಡಿದರು.

ADVERTISEMENT

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಖಾನ್, ಗ್ರಾಮ ಪಂಚಾಯಿತಿ ಸದಸ್ಯೆ ವಸಂತಿ, ಮುಖ್ಯ ಶಿಕ್ಷಕಿ ಗೀತಾ, ಎಲ್ಲಾ ಶಿಕ್ಷಕರು ಇದ್ದರು.

ಪ್ರಸಕ್ತ ಸಾಲಿನ ಶಿಕ್ಷಣ ಇಲಾಖೆಯ ಧ್ಯೇಯವಾಕ್ಯ ‘ಶೈಕ್ಷಣಿಕ ಬಲವರ್ಧನೆ’ ಕುರಿತು ಮಾಹಿತಿ ನೀಡಿದ ಶಾಲೆಯ ಮುಖ್ಯ ಶಿಕ್ಷಕಿ ಗೀತಾ, ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ ಸೌಲಭ್ಯದೊಂದಿಗೆ ವಿವಿಧ ಸವಲತ್ತುಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದರು.

ಇಲ್ಲಿನ ಸರ್ಕಾರಿ ಪ್ರೌಢಶಾಲೆ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆ, ಗದ್ದೆಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಸಿಹಿಯೊಂದಿಗೆ ಬಿಸಿಯೂಟ ವಿತರಿಸಲಾಯಿತು. ಮಕ್ಕಳು ಶಾಲಾ ಪ್ರಾರಂಭೋತ್ಸವದಲ್ಲಿ ಸಂಭ್ರಮಿಸಿದರು.

ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಶಿಕ್ಷಕರು, ಸಂತ ಅಂತೋಣಿ ಶಾಲೆಯ ಮುಖ್ಯ ಶಿಕ್ಷಕಿ ವೀರಾ ಡಿಸೋಜ ಶಿಕ್ಷಕರು ಇದ್ದರು.

ಸುಂಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಹೂ ನೀಡಿದರು
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಸಿಹಿ ಹಂಚಿ ಸಂಭ್ರಮಿಸಿದರು
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಬರಮಾಡಿಕೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.