ADVERTISEMENT

ಲೋಕಾಯುಕ್ತ ಬಲೆಗೆ ಸರ್ವೇಯರ್

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2024, 4:16 IST
Last Updated 21 ಫೆಬ್ರುವರಿ 2024, 4:16 IST
ಮಹಾದೇವಗೌಡ
ಮಹಾದೇವಗೌಡ   

ಸೋಮವಾರಪೇಟೆ: ಇಲ್ಲಿನ ಸರ್ವೆ ಕಚೇರಿಯಲ್ಲಿ ₹ 4 ಸಾವಿರ ಲಂಚ ಪಡೆಯುತ್ತಿದ್ದ ಆರೋಪ ಮೇರೆಗೆ ಸರ್ವೇಯರ್ ಎಚ್.ಕೆ.ಮಹದೇವೇಗೌಡ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದರು.

ಎಡಿಎಲ್‌ಆರ್‌ ಕಚೇರಿಯಲ್ಲಿ ಸರ್ವೇಯರ್ ಆಗಿದ್ದ ಆರೋಪಿಯು ಅಕ್ರಂಪಾಷಾ ಎಂಬುವವರಿಗೆ ಪ್ರಾಪರ್ಟಿ ಕಾರ್ಡ್‌ ಕೊಡುವುದಕ್ಕೆ ₹ 5 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿ, ₹ 1 ಸಾವಿರವನ್ನು ಮುಂಗಡವಾಗಿಯೇ ಪಡೆದಿದ್ದರು.

ಬಳಿಕ, ಅಕ್ರಂ ಪಾಷಾ ಲೋಕಾಯುಕ್ತರಿಗೆ ದೂರು ನೀಡಿದ್ದರು. ಉಳಿದ ₹ 4 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮಡಿಕೇರಿ ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್, ಇನ್‌ಸ್ಪೆಕ್ಟರ್ ಲೋಕೇಶ್ ಅವರ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ಸೋಮವಾರಪೇಟೆ ಸರ್ವೆ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್ ಮಹಾದೇವಗೌಡ ಅವರ ದಾಖಲೆಗಳನ್ನು ಪರಿಶೀಲಿಸುತ್ತಿರುವ ಅಧಿಕಾರಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.