ADVERTISEMENT

ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಿ: ಡಿಡಿಪಿಐ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಂತ ಮೈಕೆಲರ ಶಾಲೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 6:24 IST
Last Updated 5 ಡಿಸೆಂಬರ್ 2023, 6:24 IST
   

ನಾಪೋಕ್ಲು: ‘ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಎಸ್ಸೆಸ್ಸೆಲ್ಸಿ ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಎಂ.ಚಂದ್ರಕಾಂತ್ ಹೇಳಿದರು.

ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ಸೋಮವಾರ ಮಡಿಕೇರಿ ನಗರದ ಸಂತ ಮೈಕಲ್ಲರ ಶಾಲೆಯಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ‌ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಮುಖ್ಯ ಶಿಕ್ಷಕರು ಕ್ರಿಯಾಶೀಲರಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಹೆಜ್ಜೆ ಹಾಕುವ ಮೊದಲ ಪ್ರಮುಖ ಘಟ್ಟವಾಗಿದ್ದು, ಇಲ್ಲಿನ ಸಾಧನೆ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ’ ಎಂದು ಹೇಳಿದರು.

ADVERTISEMENT

‘ಕಳೆದ ಸಾಲಿನಲ್ಲಿ  ರಾಜ್ಯದಲ್ಲಿ ಜಿಲ್ಲೆಯ ಫಲಿತಾಂಶವು 9ನೇ ಸ್ಥಾನದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಫಲಿತಾಂಶವು ಮೊದಲ 5 ಸ್ಥಾನದೊಳಗೆ ಗಳಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು. ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸುವ ಮೂಲಕ ಮಕ್ಕಳಿಗೆ ಪರೀಕ್ಷಾ ಭಯ ನಿವಾರಣೆ ಮಾಡುವ ಮೂಲಕ ಅವರಲ್ಲಿ ಧೈರ್ಯ ತುಂಬಿ ಮನೋಸ್ಥೈರ್ಯ ಬೆಳೆಸಿ ಪರೀಕ್ಷೆಗೆ ಸಿದ್ಧಗೊಳಿಸಬೇಕು’ ಎಂದು ಸಲಹೆ ನೀಡಿದರು.

‘ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳಿಗೆ ಮುಂದಿನ ಉತ್ತಮ ಭವಿಷ್ಯ ನಿರ್ಮಿಸಲು ಮತ್ತು ಪರೀಕ್ಷೆ ಬಗ್ಗೆ ಭಯ ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರಣೆ ಮೂಡಿಸಬೇಕು’ ಎಂದರು.

‘ಶೈಕ್ಷಣಿಕ ಗುಣಮಟ್ಟದ ಪ್ರಗತಿ ಸಾಧಿಸಲು ಮಕ್ಕಳಿಗೆ ವಿಶೇಷ- ವಿನೂತನ ಕಾರ್ಯಕ್ರಮ ನೀಡುವ ಉದ್ದೇಶದಿಂದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಮಾಡಬೇಕು ಎಂಬ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಹೊಸ ವಿಧಾನಗಳ ಕುರಿತು ಮಾಹಿತಿ ನೀಡಿದ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ, ‘ಶಿಕ್ಷಕರು ಮಕ್ಕಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ಡಯಟ್‌ನ ಹಿರಿಯ ಉಪನ್ಯಾಸಕಿ ಗೀತಾ ಮಾತನಾಡಿ, ‘ಶಾಲೆಯ ವಾತಾವರಣ ಉತ್ತಮವಾಗಿದ್ದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಶಿಕ್ಷಕರ ನಡುವೆ ಹೊಂದಾಣಿಕೆ, ಶೈಕ್ಷಣಿಕ ತಂತ್ರಜ್ಞಾನವನ್ನು ಸೂಕ್ತವಾಗಿ ಬಳಸಿಕೊಂಡು ಬೋಧನೆ ಮಾಡಬೇಕು’ ಎಂದರು.

ಪರೀಕ್ಷಾ ಭಯ ನಿವಾರಣೆ ಹೇಗೆ ಎಂಬ ವಿಷಯದ ಕುರಿತು ಹಿರಿಯ ಉಪನ್ಯಾಸಕ ಶಿವಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಓದುವುದರಿಂದ ಜ್ಞಾನದ ಕ್ಷಿತಿಜ ವಿಸ್ತಾರವಾಗುತ್ತದೆ. ಶಿಕ್ಷಣದಲ್ಲಿ ಆಸಕ್ತಿ, ಧನಾತ್ಮಕತೆ ಹಾಗೂ ತೊಡಗಿಸಿಕೊಳ್ಳುವುದರಿಂದ ಉತ್ತಮ ಕಲಿಕೆ ಸಾಧ್ಯ. ಶಿಕ್ಷಕರು ಮಕ್ಕಳ ಮೇಲೆ ಒತ್ತಡ ಹೇರಬಾರದು. ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡಬಾರದು. ಉತ್ತಮ ಅಭ್ಯಾಸ, ಗುಂಪು ಓದು ಪರಿಣಾಮಕಾರಿ ಕಲಿಕೆಗೆ ನೆರವಾಗುತ್ತದೆ’ ಎಂದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿದರು.

ಡಯಟ್ ಉಪನ್ಯಾಸಕರಾದ ಎಸ್.ಪಿ.ಮಹಾದೇವ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿಗಳಾದ ಎಂ.ಕೃಷ್ಣಪ್ಪ, ಸೌಮ್ಯ ಪೊನ್ನಪ್ಪ, ವಿರಾಜಪೇಟೆ ಬಿಇಒ ಎಂ.ಪ್ರಕಾಶ್, ಸೋಮವಾರಪೇಟೆ ಪ್ರಭಾರ ಬಿಇಒ ಎಂ.ವಿ.ಮಂಜೇಶ್, ಮಡಿಕೇರಿ ಬಿಇಒ ದೊಡ್ಡೇಗೌಡ, ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಎಸ್.ಶಿವಕುಮಾರ್, ಎಸ್.ಪಿ.ಮಹಾದೇವ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳಾದ ಕೆ.ಪಿ.ಗುರುರಾಜ್, ಜಿ.ಎಂ.ಹೇಮಂತ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್, ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ರಾಪುರ ಕಾರ್ಯಕ್ರಮ ನಿರ್ವಹಿಸಿದರು.

ಮಡಿಕೇರಿ ಸಂತ ಮೈಕಲ್ಲರ ಶಾಲೆಯಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಕಾರ್ಯಾಗಾರದಲ್ಲಿ ಡಿಡಿಪಿಐ ಎಂ.ಚಂದ್ರಕಾಂತ್ ಮಾತನಾಡಿದರು
ಕಾರ್ಯಾಗಾರದಲ್ಲಿ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು

- ‘ಸ್ಕೋರಿಂಗ್ ಪಾಸಿಂಗ್ ಪ್ಯಾಕೇಜ್’

‘ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಕರು ಶಾಲಾ ಹಂತದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಇಲಾಖೆಯು ಜಿಲ್ಲಾ ಹಂತದ ಕಾರ್ಯಾಗಾರವನ್ನು ಹಮ್ಮಿಕೊಂಡು ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ನೀಡುತ್ತಿದೆ. ಸ್ಕೋರಿಂಗ್ ಪ್ಯಾಕೇಜ್ ಹಾಗೂ ಪಾಸಿಂಗ್ ಪ್ಯಾಕೇಜ್ ಬಳಸಿ ಪ್ರತಿ ವಿದ್ಯಾರ್ಥಿ ಉತ್ತೀರ್ಣರಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲೆಗಳಲ್ಲಿ 5 8 ಮತ್ತು 9ನೇ ತರಗತಿಗೆ ಮಾರ್ಚ್ 2ನೇ ವಾರದಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುತ್ತದೆ’ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಚಂದ್ರಕಾಂತ್ ವಿವರಿಸಿದರು.

ನಾಪೋಕ್ಲು: ‘ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಎಸ್ಸೆಸ್ಸೆಲ್ಸಿ ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಎಂ.ಚಂದ್ರಕಾಂತ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯಿಂದ ಸೋಮವಾರ ಮಡಿಕೇರಿ ನಗರದ ಸಂತ ಮೈಕಲ್ಲರ ಶಾಲೆಯಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ‌ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ‘ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು ಮುಖ್ಯ ಶಿಕ್ಷಕರು ಕ್ರಿಯಾಶೀಲರಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಹೆಜ್ಜೆ ಹಾಕುವ ಮೊದಲ ಪ್ರಮುಖ ಘಟ್ಟವಾಗಿದ್ದು ಇಲ್ಲಿನ ಸಾಧನೆ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ’ ಎಂದು ಹೇಳಿದರು. ‘ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಜಿಲ್ಲೆಯ ಫಲಿತಾಂಶವು 9ನೇ ಸ್ಥಾನದಲ್ಲಿದ್ದು ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಫಲಿತಾಂಶವು ಮೊದಲ 5 ಸ್ಥಾನದೊಳಗೆ ಗಳಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು. ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸುವ ಮೂಲಕ ಮಕ್ಕಳಿಗೆ ಪರೀಕ್ಷಾ ಭಯ ನಿವಾರಣೆ ಮಾಡುವ ಮೂಲಕ ಅವರಲ್ಲಿ ಧೈರ್ಯ ತುಂಬಿ ಮನೋಸ್ಥೈರ್ಯ ಬೆಳೆಸಿ ಪರೀಕ್ಷೆಗೆ ಸಿದ್ಧಗೊಳಿಸಬೇಕು’ ಎಂದು ಸಲಹೆ ನೀಡಿದರು. ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಯಾರಿಕೆಗೆ ಸಿದ್ಧತೆ ಬಗ್ಗೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳಿಗೆ ಮುಂದಿನ ಉತ್ತಮ ಭವಿಷ್ಯ ನಿರ್ಮಿಸಲು ಮತ್ತು ಪರೀಕ್ಷೆ ಬಗ್ಗೆ ಭಯ ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರಣೆ ಮೂಡಿಸಬೇಕು ಎಂದರು. ಶೈಕ್ಷಣಿಕ ಗುಣಮಟ್ಟ ಪ್ರಗತಿ ಸಾಧಿಸಲು ಮಕ್ಕಳಿಗೆ ವಿಶೇಷ-ವಿನೂತನ ಕಾರ್ಯಕ್ರಮ ನೀಡುವ ಉದ್ದೇಶದಿಂದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಮಾಡಬೇಕು ಎಂಬ ಉದ್ದೇಶದಿಂದ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಹೊಸ ವಿಧಾನಗಳ ಕುರಿತು ಮಾಹಿತಿ ನೀಡಿದ ಡಿಡಿಪಿಐ ಕಛೇರಿಯ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಮಕ್ಕಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.ಡಯಟ್ ನ ಹಿರಿಯ ಉಪನ್ಯಾಸಕಿ ಗೀತಾ ಮಾತನಾಡಿ ಶಾಲೆಯ ವಾತಾವರಣ ಉತ್ತಮವಾಗಿದ್ದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು. ಶಿಕ್ಷಕರ ನಡುವೆ ಹೊಂದಾಣಿಕೆ ಇರಬೇಕು ಶೈಕ್ಷಣಿಕ ತಂತ್ರಜ್ಞಾನವನ್ನು ಸೂಕ್ತವಾಗಿ ಬಳಸಿಕೊಂಡು ಬೋಧನೆ ಮಾಡಿದರೆ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ಸಾಧ್ಯ ಎಂದರು. ಪರೀಕ್ಷಾ ಭಯ ನಿವಾರಣೆ ಹೇಗೆ ಎಂಬ ವಿಷಯದ ಕುರಿತು ಹಿರಿಯ ಉಪನ್ಯಾಸಕ ಶಿವಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಓದುವುದರಿಂದ ಜ್ಞಾನದ ಕ್ಷಿತೀಜ ವಿಸ್ತಾರವಾಗುತ್ತದೆ.ಶಿಕ್ಷಣದಲ್ಲಿ ಆಸಕ್ತಿ ಧನಾತ್ಮಕತೆ ಹಾಗೂ ತೊಡಗಿಸಿಕೊಳ್ಳುವುದರಿಂದ ಉತ್ತಮ ಕಲಿಕೆ ಸಾಧ್ಯ ಎಂದರು. ಶಿಕ್ಷಕರು ಮಕ್ಕಳ ಮೇಲೆ ಒತ್ತಡ ಹೇರಬಾರದು. ಮಕ್ಕಳನ್ನು ಇತರರೊಂದಿಗೆ ಹೋಲಿಕೆ ಮಾಡಬಾರದು.ಉತ್ತಮ ಅಭ್ಯಾಸಗುಂಪು ಓದು ಪರಿಣಾಮಕಾರಿ ಕಲಿಕೆಗೆ ನೆರವಾಗುತ್ತದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜವಾಬ್ದಾರಿ ಹಾಗೂ ಸಮನ್ವಯತೆಯಿಂದ ಕೆನಿರ್ವಹಿಸಿದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ಸಾಧ್ಯ. ಈ ದಿಸೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ನಿರಂತರ ಪ್ರಯತ್ನ ಮಾಡೋಣ ಎಂದರು.ಡಯಟ್ ಉಪನ್ಯಾಸಕರಾದ ಎಸ್.ಪಿ.ಮಹಾದೇವ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿಗಳಾದ ಎಂ.ಕೃಷ್ಣಪ್ಪ ಸೌಮ್ಯ ಪೊನ್ನಪ್ಪ ವಿರಾಜಪೇಟೆ ಬಿಇಓ ಎಂ.ಪ್ರಕಾಶ್ ಸೋಮವಾರಪೇಟೆ ಪ್ರಭಾರ ಬಿಇಓ ಎಂ.ವಿ.ಮಂಜೇಶ್ಮಡಿಕೇರಿ ಬಿಇಒ ದೊಡ್ಡೇಗೌಡ ಕೂಡಿಗೆ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಎಸ್.ಶಿವಕುಮಾರ್ ಎಸ್.ಪಿ.ಮಹಾದೇವ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳಾದ ಕೆ.ಪಿ.ಗುರುರಾಜ್ ಜಿ.ಎಂ.ಹೇಮಂತ್ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ರಾಪುರ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.