ಮಡಿಕೇರಿ: ತಲಕಾವೇರಿಯ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅ. 17ರಂದು ಬೆಳಿಗ್ಗೆ 7.40ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ತಿಳಿಸಿದೆ.
ಇದಕ್ಕೂ ಮುನ್ನ ಸೆ. 26ರಂದು ಬೆಳಿಗ್ಗೆ 8.35ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ‘ಪತ್ತಾಯಕ್ಕೆ ಅಕ್ಕಿ ಹಾಕುವ’ ಕಾರ್ಯ ನಡೆಯಲಿದೆ. ಅ. 4ರಂದು ಬೆಳಿಗ್ಗೆ 10.21ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನಡೆಯಲಿದೆ. ಅ. 14ರಂದು ಬೆಳಿಗ್ಗೆ 11.35ಕ್ಕೆ ಸಲ್ಲುವ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುತ್ತದೆ. ಅಂದು ಸಂಜೆ 4.15ಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸಲಾಗುತ್ತದೆ.
ಈ ಸಂಬಂಧ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶನಿವಾರ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.