ADVERTISEMENT

ಕೊಡಗು: ಹುಲಿ ದಾಳಿಗೆ 2ನೇ ಬಲಿ, ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆ ಆರಂಭ 

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 8:26 IST
Last Updated 21 ಫೆಬ್ರುವರಿ 2021, 8:26 IST
   

ಪೊನ್ನಂಪೇಟೆ (ಕೊಡಗು): ಜಿಲ್ಲೆಯ ಶ್ರೀಮಂಗಲ ಸಮೀಪದ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಹುಲಿ ದಾಳಿಗೆ 2ನೇ ಬಲಿಯಾಗಿದೆ.

ಸೋಮಣ್ಣ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ಶನಿವಾರ ಸಂಜೆ ಇದೇ ಸ್ಥಳದ ಆಸುಪಾಸಿನಲ್ಲಿ ವಿದ್ಯಾರ್ಥಿ ಅಯ್ಯಪ್ಪ ಎಂಬಾತ ಹುಲಿ ದಾಳಿಯಿಂದ ಮೃತಪಟ್ಟಿದ್ದ. ಎರಡು ದಿನದಲ್ಲಿ ಇಬ್ಬರು ಹುಲಿ ದಾಳಿಯಿಂದ ಮೃತಪಟ್ಟಿದ್ದು ಬೆಳೆಗಾರರು, ಕಾರ್ಮಿಕರಲ್ಲಿ ಆತಂಕ ಮತ್ತಷ್ಟು ಹೆಚ್ಚಿದೆ.

‘ಕಳೆದ ಐದು ತಿಂಗಳಿಂದ ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದ ಹುಲಿಯು ಈಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ. ಈ ಹಿಂದೆಯೇ ಈ ಹುಲಿಯನ್ನು ಸೆರೆ ಹಿಡಿಯಬೇಕಿತ್ತು. ಅರಣ್ಯ ಇಲಾಖೆಯವರ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿ ಪ್ರತಿಭಟನೆ ನಡೆಸಿದರು. ರೈತರು ಸಂಘದ ಕಾರ್ಯಕರ್ತರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ADVERTISEMENT

ಕಾರ್ಯಾಚರಣೆ ಆರಂಭ:ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ, ಮತ್ತಿಗೋಡು ಶಿಬಿರದ ಸಾಕಾನೆ ಬಳಸಿಕೊಂಡು ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಭಿಮನ್ಯು ಹಾಗೂ ಬಾಲಕೃಷ್ಣ ಎಂಬ ಎರಡು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಬೋನ್‌ ಸಹ ಇಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.