ADVERTISEMENT

ಇಂದು ಕಾವೇರಿ ತೀರ್ಥೋದ್ಭವ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 1:09 IST
Last Updated 17 ಅಕ್ಟೋಬರ್ 2024, 1:09 IST
<div class="paragraphs"><p> ತೀರ್ಥೋದ್ಭವ (ಸಂಗ್ರಹ ಚಿತ್ರ)</p></div>

ತೀರ್ಥೋದ್ಭವ (ಸಂಗ್ರಹ ಚಿತ್ರ)

   

ಮಡಿಕೇರಿ: ಇಲ್ಲಿನ ತಲಕಾವೇರಿಯಲ್ಲಿ ಅ.17ರಂದು ಬೆಳಿಗ್ಗೆ 7.40ಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಲಿದೆ.

ಇದಕ್ಕಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಸಿದ್ಧತೆಗಳು  ಪೂರ್ಣಗೊಂಡಿವೆ. ಲಕ್ಷಾಂತರ ಮಂದಿ ಭಕ್ತರು ಭೇಟಿ ನೀಡಲಿದ್ದು, ಭಾಗಮಂಡಲದಿಂದ ತಲಕಾವೇರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಪಾದಯಾತ್ರೆಯಲ್ಲೂ ಸಾವಿರಾರು ಭಕ್ತರು ಬರುವುದರಿಂದ, ಭಾಗಮಂಡಲದಿಂದ ತಲಕಾವೇರಿಯವರೆಗೆ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ತೀರ್ಥವನ್ನು ಪ್ಲಾಸ್ಟಿಕ್ ಕೊಡ, ಕ್ಯಾನ್‌, ಬಾಟಲಿಗಳಲ್ಲಿ ಸಂಗ್ರಹಿಸುವುದನ್ನು ನಿಷೇಧಿಸಲಾಗಿದೆ.

ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಕಾನೂನು ಸಲಹೆಗಾರ
ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಮಂತರ್ ಗೌಡ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.