ADVERTISEMENT

ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 6:35 IST
Last Updated 29 ಜೂನ್ 2024, 6:35 IST

ಮಡಿಕೇರಿ: ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಎಲ್ಲ ಬಗೆಯ ಮರಳು ಮತ್ತು ಮರದ ದಿಮ್ಮಿಗಳನ್ನು ಸಾಗಿಸುವ, 18,500 ಕೆ.ಜಿಗಿಂತ ಹೆಚ್ಚಿನ ಸರಕು ಸಾಗಿಸುವ ವಾಹನಗಳು, ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೇನರ್, ಆರ್ಟ್‌ಕ್ಯುಲೇಟೆಡ್ ವಾಹನಗಳ ಸಂಚಾರವನ್ನು ಜಿಲ್ಲೆಯಾದ್ಯಂತ ನಿಷೇಧಿಸಲಾಗಿದೆ.

ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣದ ವಾಹನಗಳಷ್ಟೇ ಸಂಚರಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.