ಕುಶಾಲನಗರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಬುಧವಾರ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ನಾಲ್ವರು ಪತ್ರಿಕಾ ವಿತರಕರನ್ನು ಗೌರವಿಸಲಾಯಿತು.
ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪದ ಗಿರಗೂರಿನ ಡ್ಯೂ ಡ್ರಾಪ್ಸ್ ರೆಸಾರ್ಟ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕುಶಾಲನಗರದ ಪತ್ರಿಕಾ ವಿತರಕರಾದ ಹಾರಂಗಿ ಚಂದ್ರಣ್ಣ, ವಿ.ಪಿ.ಸುಖೇಶ್, ಕೃಷ್ಣ ಹಾಗೂ ಸತ್ಯ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ‘ಬಜೆಟ್‌ನಲ್ಲಿ ವಿತರಕರ ಹಿತರಕ್ಷಣೆಗಾಗಿ ಘೋಷಿಸಿದ ₹ 2 ಕೋಟಿ ಮೊತ್ತದ ಯೋಜನೆ ಕಾರ್ಯರೂಪಕ್ಕೆ ಬರಬೇಕು’ ಎಂದು ಒತ್ತಾಯಿಸಿದರು.
ಪತ್ರಿಕೆ ಹಂಚುವ ಕಾಯಕಯೋಗಿಗಳು ಪತ್ರಿಕೆ ಹಾಗೂ ಓದುಗರ ನಡುವೆ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುತ್ತಾರೆ. ಕಳೆದೆರೆಡು ದಶಕಗಳಿಗೆ ಹೋಲಿಸಿದರೆ ಪತ್ರಿಕೆಗಳ ವಿತರಣೆ ಸಂಖ್ಯೆ ಹೆಚ್ಚಾಗಿದ್ದರೂ ಓದುಗರ ಸಂಖ್ಯೆ ಇಳಿಮುಖಗೊಳ್ಳುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು, ವಿಶೇಷ ವರದಿಗಳು ಬಿತ್ತರಗೊಳ್ಳುತ್ತಿರುವ ಕಾರಣದಿಂದಲೂ ಪತ್ರಿಕೆಗಳ ಮೇಲಿನ ಆಸಕ್ತಿ ಕ್ಷೀಣಿಸುತ್ತಿದೆ. ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಸರ್ಕಾರ ನೈಜ ಕಾಳಜಿ ವಹಿಸಬೇಕಿದೆ ಎಂದು ಒತ್ತಾಯಿಸಿದರು. ಎಂದು ಹೇಳಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಮಾತನಾಡಿ, ‘ಪತ್ರಿಕಾ ವಿತರಕರದ್ದು ನಿಸ್ವಾರ್ಥ ಸೇವೆ. ಅತ್ಯಂತ ಜವಾಬ್ದಾರಿಯ, ಸಮಯ ಪ್ರಜ್ಞೆಯಿಂದ, ಬಿಸಿಲು, ಮಳೆ, ಚಳಿಯಲ್ಲಿ ಶ್ರಮದ ಕಾರ್ಯ ನಿರ್ವಹಿಸುವ ಈ ವರ್ಗದವರನ್ನು ಅತ್ಯವಶ್ಯಕವಾಗಿ ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದರು.
ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಮಾತನಾಡಿ, ‘ಪತ್ರಿಕಾ ವಿತರಣೆ ಕಾರ್ಯ ಅತ್ಯಂತ ಸಾಹಸಮಯ ಕಾರ್ಯವಾಗಿದೆ. ಬೀದಿನಾಯಿಗಳ ಹಾವಳಿ ನಡುವೆ ಪತ್ರಿಕೆ ವಿತರಣೆ ಮಾಡಿ, ಶುಲ್ಕ ವಸೂಲಿ ಮಾಡುವುದು ಅತ್ಯಂತ ಅಪಾಯಕಾರಿ ಪರಿಸ್ಥಿತಿ’ ಎಂದು ಹೇಳಿದರು.
ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಬಿಜೆಪಿ ಮುಖಂಡ ಹೇರೂರು ಚಂದ್ರಶೇಖರ್, ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಹೆಬ್ಬಾಲೆ ರಘು, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಜು ರೈ, ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಖಜಾಂಚಿ ಕುಡೆಕಲ್ ಗಣೇಶ್, ಕಾರ್ಯದರ್ಶಿ ನಾಗರಾಜ ಶೆಟ್ಟಿ, ಕಾರ್ಯಕ್ರಮ ಸಂಚಾಲಕ ಟಿ.ಆರ್.ಪ್ರಭುದೇವ್, ಸಹ ಸಂಚಾಲಕರಾದ ಜಯಪ್ರಕಾಶ್, ಮಹಮ್ಮದ್ ಮುಸ್ತಾಫ, ಕೊಡಗು ಪ್ರೆಸ್ ಕ್ಲಬ್ ಸಂಘಟನಾ ಕಾರ್ಯದರ್ಶಿ ಶಿವರಾಜ್, ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘದ ನಿರ್ದೇಶಕ ಇಸ್ಮಾಯಿಲ್ ಕಂಡಕೆರೆ, ಶಂಶುದ್ದಿನ್, ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.