ADVERTISEMENT

ವಿರಾಜಪೇಟೆ: ಡಾ. ಸುಧಾಕರ್ ಶೆಟ್ಟಿ ಅವರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 12:50 IST
Last Updated 9 ಫೆಬ್ರುವರಿ 2024, 12:50 IST
ವಿರಾಜಪೇಟೆ ಸಮೀಪದ ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಒದಗಿಸಿದ ಡಾ. ಸುಧಾಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕೆ.ಪಿ. ಉತ್ತಪ್ಪ, ಕೆ.ಕೆ.ಶೈನಾ, ಶಿವದಾಸ್, ಪಾರ್ವತಿ, ಸುನೀತಾ ಭಾಗವಹಿಸಿದ್ದರು.

ವಿರಾಜಪೇಟೆ: ಸಮಾಜ ಸೇವೆಯ ಮೂಲಕ ದೇವರನ್ನು ಕಾಣಬಹುದು. ಆದರಿಂದ ಪ್ರತಿಯೊಬ್ಬರೂ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಡಿಕೇರಿ ಡೇರಿಯನ್ ಅಸೋಸಿಯೇಷನ್‌ ಅಧ್ಯಕ್ಷ ಕೆ.ಪಿ. ಉತ್ತಪ್ಪ ಹೇಳಿದರು.

ಪಾಲಿಬೆಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಡಾ. ಸುಧಾಕರ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಬಳಕೆಗೆಂದು₹ 50 ಸಾವಿರ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಒದಗಿಸಿದ ವೈದ್ಯ ಡಾ. ಸುಧಾಕರ್ ಶೆಟ್ಟಿ ಅವರನ್ನು ಶುಕ್ರವಾರ ಸನ್ಮಾನಿಸಲಾಯಿತು.

ADVERTISEMENT

ಪ್ರಾಂಶುಪಾಲೆ ಕೆ.ಕೆ.ಶೈನಾ, ಉಪನ್ಯಾಸಕರಾದ ಶಿವದಾಸ್, ಪಾರ್ವತಿ, ಸುನೀತಾ , ಕಾಲೇಜು ಅಭಿವೃದ್ಧಿ ಸಮಿತಿಯ ಪದಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.