ADVERTISEMENT

ವಿರಾಜಪೇಟೆ ಪುರಸಭೆ: ಮೀಸಲಾತಿ ‍ಪ್ರಕಟವಾದರೂ ನಡೆಯದ ಚುನಾವಣೆ

ವಿರಾಜಪೇಟೆ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಎಂದು?

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2024, 4:18 IST
Last Updated 5 ಸೆಪ್ಟೆಂಬರ್ 2024, 4:18 IST
ವಿರಾಜಪೇಟೆ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ದಿನಾಂಕವನ್ನು ಘೋಷಿಸಬೇಕು ಎಂದು ಒತ್ತಾಯಿಸಿ ಬಿಜೆಪಿಯ ಪ್ರಮುಖರು ಬುಧವಾರ ತಹಶೀಲ್ದಾರ್ ರಾಮಚಂದ್ರ ಅವರಿಗೆ ಮನವಿ ಸಲ್ಲಿಸಿದರು
ವಿರಾಜಪೇಟೆ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ದಿನಾಂಕವನ್ನು ಘೋಷಿಸಬೇಕು ಎಂದು ಒತ್ತಾಯಿಸಿ ಬಿಜೆಪಿಯ ಪ್ರಮುಖರು ಬುಧವಾರ ತಹಶೀಲ್ದಾರ್ ರಾಮಚಂದ್ರ ಅವರಿಗೆ ಮನವಿ ಸಲ್ಲಿಸಿದರು   

ವಿರಾಜಪೇಟೆ: ವಿರಾಜಪೇಟೆ ಪುರಸಭೆಯ ಎರಡನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಆ. 7ರಂದೇ ಪ್ರಕಟವಾಗಿದ್ದರೂ, ಈವರೆಗೆ ಚುನಾವಣೆ ಘೋಷಣೆ ಮಾಡದೆ ವಿಳಂಬ ಧೋರಣೆ ತೋರುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿಯವರು ಬುಧವಾರ ತಹಶೀಲ್ದಾರ್ ರಾಮಚಂದ್ರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ವಿರಾಜಪೇಟೆ ಮಂಡಲದ ಅಧ್ಯಕ್ಷ ಎಂ. ಸುವೀನ್ ಗಣಪತಿ ಮಾತನಾಡಿ, ‘ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಪ್ರಕಟಗೊಂಡು ಸುಮಾರು 25 ದಿನಗಳು ಕಳೆದಿದ್ದರೂ ಚುನಾವಣೆ ಪ್ರಕ್ರಿಯನ್ನು ನಡೆಸದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಮೀಸಲಾತಿ ಘೋಷಣೆಯ ಬಳಿಕ ಹಲವಾರು ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, ಇಲ್ಲಿ ವಿನಾಕಾರಣ ವಿಳಂಬ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

‘ಕೂಡಲೇ ಆಯ್ಕೆ ಪ್ರಕ್ರಿಯೆ ದಿನಾಂಕವನ್ನು ಘೋಷಿಸಬೇಕು. ಇಲ್ಲವಾದಲ್ಲಿ ಸೆ. 9ರಂದು ಮಿನಿ ವಿಧಾನಸೌಧದ ಮುಂಭಾದ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಮನವಿ ಸ್ವೀಕರಿಸಿದ ತಹಶೀಲ್ದಾರ್ ರಾಮಚಂದ್ರ ಮಾತನಾಡಿ, ‘ಪಾರದರ್ಶಕವಾಗಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ಈ ಸಂದರ್ಭ ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಪಿ. ಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಪ್ರಮುಖರಾದ ಪಿ.ರಘು ನಾಣಯ್ಯ, ಎ.ಅನಿಲ್ ಮಂದಣ್ಣ, ಸಂಪಿ ಪೂಣಚ್ಚ, ಕೂತಂಡ ಸಚಿನ್, ರತ್ನಾಕರ ಶೆಟ್ಟಿ, ಪುರಸಭೆಯ ಸದಸ್ಯರಾದ ಮಹಾದೇವ, ಸುನೀತಾ, ಸುಶ್ಮೀತಾ, ಆಶಾ ಸುಬ್ಬಯ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.