ಸೋಮವಾರಪೇಟೆ: ಸಮೀಪದ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದ್ದು, ಕೃಷಿ ಫಸಲು ಮತ್ತು ಗಿಡಗಳಿಗೆ ಹಾನಿ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದ ಚಂದ್ರಶೇಖರ್ ಮತ್ತು ಸೋಮಶೇಖರ್ ಎಂಬುವರ ತೋಟಗಳಿಗೆ ಭಾನುವಾರ ರಾತ್ರಿ ನುಗ್ಗಿ ದಾಳಿ ಮಾಡಿರುವ ಕಾಡುಹಂದಿಗಳ ಹಿಂಡು ಸುಮಾರು 30 ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ.
ಕೃಷಿಕ ಚಂದ್ರಶೇಖರ್ ಮಾತನಾಡಿ, ‘ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಸಾಕಷ್ಟು ಹಾನಿ ಮಾಡುತ್ತಿವೆ. ಇವುಗಳನ್ನು ಕೊಂದಲ್ಲಿ ಅರಣ್ಯ ಇಲಾಖೆಯವರು ತಕ್ಷಣ ಸ್ಪಂದಿಸಿ ಕ್ರಮಕ್ಕೆ ಮುಂದಾಗುತ್ತಾರೆ. ಆದರೆ, ನಷ್ಟಪಡಿಸಿದ್ದಕ್ಕೆ ಪರಿಹಾರ ಕೇಳಿದಲ್ಲಿ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಬೆಳೆಗಾರರಿಗೆ ನಷ್ಟವಾಗುತ್ತಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.