ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರಿನ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಅಜಬಾನು (37) ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
‘ಬುಧವಾರ ಮಧ್ಯಾಹ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಕಾಡಾನೆಯೊಂದು ದಾಳಿ ನಡೆಸಿದೆ. ದಾಳಿಗೆ ಸಿಲುಕಿದ ಅಜಬಾನು ಅವರನ್ನು ಕೂಡಲೇ ಪಾಲಿಬೆಟ್ಟದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ನಾಗರಹೊಳೆ ಅರಣ್ಯ ಇಲ್ಲಿಗೆ ಕೇವಲ 2 ಕಿ.ಮೀ ಇದೆ. ಅಲ್ಲಿಂದ ಬಂದಿರುವ ಈ ಆನೆಯನ್ನು ನಿರಂತರವಾಗಿ ಕಾಡಿಗೆ ಓಡಿಸಲಾಗುತ್ತಿದೆ. ಆದರೆ, ಮತ್ತೆ ಮತ್ತೆ ಅದು ಕಾಫಿತೋಟಗಳಿಗೆ ವಾಪಸ್ ಬರುತ್ತಿದೆ’ ಎಂದು ವಿರಾಜಪೇಟೆ ವಲಯದ ಡಿಸಿಎಫ್ ಶರಣ ಬಸಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.
ಆಸ್ಪತ್ರೆ ಮುಂದೆ ಜಮಾಯಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.