ADVERTISEMENT

ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಪ್ರಕರಣಗಳೂ ವಾಪಸ್: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2024, 13:29 IST
Last Updated 11 ಅಕ್ಟೋಬರ್ 2024, 13:29 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಮಡಿಕೇರಿ: ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಮೇಲೂ ಇದ್ದ ಪ್ರಕರಣಗಳನ್ನೂ ವಾಪಸ್ ಪಡೆದಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಹುಬ್ಬಳ್ಳಿಯ ಗಲಭೆ ಪ್ರಕರಣಗಳನ್ನು ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿ ಶುಕ್ರವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಇನ್ನುಳಿದ ವಿಚಾರವನ್ನು ಗೃಹಸಚಿವರು ಹೇಳುತ್ತಾರೆ ಎಂದರು.

ADVERTISEMENT

ಕಾಂಗ್ರೆಸ್ ಸರ್ಕಾರ ದಸರಾ ಶುಭಾಶಯದಲ್ಲಿ ದುಷ್ಟಶಕ್ತಿಗಳು ನಾಶವಾಗಲಿ ಎಂದು ಜಾಹೀರಾತು ನೀಡಿರುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು

ನಾನು ಜೆಡಿಎಸ್, ಬಿಜೆಪಿಯವರಿಗಾಗಲಿ ಉತ್ತರ ಕೊಡುವುದಕ್ಕೆ ಹೋಗುವುದಿಲ್ಲ. ಆದರೆ, ಅನಗತ್ಯ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತಿರುವವರೇ ದುಷ್ಟಶಕ್ತಿಗಳು ಎಂದು ಹೇಳಿದರು.

ಜಾತಿ ಗಣತಿ ವರದಿ ಜಾರಿಗೊಳಿಸುವ ವಿಚಾರ ಕುರಿತು ಮಾತನಾಡಿದ ಅವರು ಮೊದಲು ಬಿಜೆಪಿಯ ನಿಲುವು ಏನು ಎನ್ನುವುದನ್ನು ತಿಳಿಸಲಿ. ಆ ಮೇಲೆ ನಮ್ಮ ನಿರ್ಧಾರ ಏನು ಎನ್ನುವುದನ್ನು ತಿಳಿಸುತ್ತೇವೆ ಎಂದರು.

ಬೆಂಗಳೂರಿನ ಎಲ್ಲೆಡೆ ಕನ್ನಡ ಧ್ವಜ

ಹೊರಗಡೆಯಿಂದ ಬಂದವರಿಗೆ ಕನ್ನಡ ಪ್ರೇಮ ಗೊತ್ತಾಗಲಿ ಎಂದು ಈ ಬಾರಿ ಕನ್ನಡ ರಾಜ್ಯೋತ್ಸವದಲ್ಲಿ ಬೆಂಗಳೂರಿನ ಶಾಲಾ, ಕಾಲೇಜು ಐಟಿ, ಬಿಟಿ ಕಂಪನಿಗಳು ಸೇರಿದಂತೆ ಎಲ್ಲಾ ಕಡೆ ಕನ್ನಡ ಧ್ವಜ ಹಾರಿಸಬೇಕು ಎಂದು ಸೂಚಿಸಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.