ADVERTISEMENT

5ರಂದು ಕೃತಿ ಬಿಡುಗಡೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 4:32 IST
Last Updated 3 ಜುಲೈ 2024, 4:32 IST
ಕೃತಿ
ಕೃತಿ   

ಮಡಿಕೇರಿ: ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಸಾಹಿತಿ ಡಾ.ಜಿ.ಟಿ.ನಾರಾಯಣ ಅವರ ಬದುಕು ಬರಹ ಕುರಿತ ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಸಮಾರಂಭವು ಜುಲೈ 5ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ನಗರಸಭೆ ಸದಸ್ಯ ಕೆ.ಎಸ್.ರಮೇಶ್ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ ಅವರು ಕಿಗ್ಗಾಲು ಗಿರೀಶ್ ಅವರ ‘ಕಳೆದುಕೊಂಡವನು ಮತ್ತು ಇನ್ನಿತರ ಕಥೆಗಳು’ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.

ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಡಾ.ಜಿ.ಟಿ.ನಾರಾಯಣ ಅವರ ಬದುಕು ಬರಹ ಕುರಿತು ಜಯಲಕ್ಷ್ಮಿ ಶೇಖರ್ ವಿಚಾರ ಮಂಡಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ್ ಅವರು ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಪತ್ರಕರ್ತ ಕುಡೆಕಲ್ ಸಂತೋಷ್ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಹಿತಿ ಕಿಗ್ಗಾಲು ಗಿರೀಶ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.