ಮುಳಬಾಗಿಲು: ಖಾದ್ರಿಪುರ ಬಾವಿಯಲ್ಲಿ ಭಾನುವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಯಲ್ಲಿರುವ ಶವವನ್ನು ಕೆಜಿಎಫ್ ತಾಲ್ಲೂಕಿನ ಗೆನ್ನೇರಹಳ್ಳಿಯ ಸೋಮಶೇಖರ್ (40) ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯ ಶವವನ್ನು ದೊಡ್ಡ ಗಾತ್ರದ ಕಲ್ಲಿಗೆ ಹಗ್ಗದಿಂದ ಕಟ್ಟಿ ಬಾವಿಯಲ್ಲಿ ಬಿಸಾಡಿದಂತೆ ಕಂಡುಬಂದಿದೆ. 10 ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಡಿವೈಎಸ್ಪಿ ಡಿ.ಸಿ.ನಂದಕಮಾರ್, ಸರ್ಕಲ್ ಇನ್ಸ್ಪೆಕ್ಟರ್ ಸತೀಶ್, ಸಬ್ಇನ್ಸ್ಪೆಕ್ಟರ್ ವಿಠಲ್ ವೈ. ತಳವಾರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.