ADVERTISEMENT

ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟ: ಕೋಲಾರದಲ್ಲಿ ಕಟ್ಟೆಚ್ಚರಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 13:07 IST
Last Updated 27 ಏಪ್ರಿಲ್ 2019, 13:07 IST
-ಸಾಂದರ್ಭಿಕ ಚಿತ್ರ
-ಸಾಂದರ್ಭಿಕ ಚಿತ್ರ   

ಕೋಲಾರ: ‘ಶ್ರೀಲಂಕಾದಲ್ಲಿ ನಡೆದಿರುವ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರವಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಅತಿ ಹೆಚ್ಚು ಜನ ಸಂದಣಿ ಇರುವ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ’ ಎಂದರು.

‘ಸಮಾಜದಲ್ಲಿ ಶಾಂತಿ ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೂ ಇದೆ. ಇದರಿಂದಾಗಿ ಎಲ್ಲಾದರೂ ಅನುಮಾನಸ್ಪದ ವ್ಯಕ್ತಿಗಳು ಕಾಣಿಸಿದರೆ ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಕುರಿತು ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಕ್ರಮಕೈಗೊಂಡಿದ್ದಾರೆ’ ಎಂದು ಹೇಳಿದರು.

ADVERTISEMENT

‘ಜಿಲ್ಲೆಯಲ್ಲಿ 82 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, 31 ಹಳ್ಳಿಗೆ ಖಾಸಗಿ ಕೊಳವೆಬಾವಿಗಳ ಹಾಗೂ ಉಳಿದ 32 ಹಳ್ಳಿಗೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಜತೆಗೆ ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ 77 ವಾರ್ಡ್‌ಗಳಲ್ಲಿ ಸಮಸ್ಯೆ ಎದುರಾಗಿದೆ. ಜನಕ್ಕೆ ಯಾವುದೇ ರೀತಿ ತೊಂದರೆ ಎದುರಾಗದಂತೆ ಕ್ರಮಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

‘ಮುಂದಿನ ದಿನಗಳಲ್ಲಿ ಇದೇ ರೀತಿಯ ಹವಮಾನ ಪರಿಸ್ಥಿತಿ ಮುಂದುವರೆದರೆ ಇನ್ನು ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ. ಬರ ಪರಿಸ್ಥಿಯ ಬಗ್ಗೆ ವರದಿ ನೀಡಲು ನೋಡಲ್ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾಧ್ಯವಾದರೆ ಕೊಳವೆಬಾವಿ ಕೊರೆಸಲಾಗುವುದು, ಅಗದಿದ್ದಲ್ಲಿ ಖಾಸಗಿ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.