ADVERTISEMENT

ಕೋಲಾರ: ವಿವಾದಿತ ಕ್ಲಾಕ್ ಟವರ್‌ನಲ್ಲಿ ಮೊದಲ ಬಾರಿ ರಾಷ್ಟ್ರ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 5:03 IST
Last Updated 15 ಆಗಸ್ಟ್ 2022, 5:03 IST
ಕೋಲಾರ ನಗರದ ವಿವಾದಿತ ಕ್ಲಾಕ್‌ ಟವರ್‌ನಲ್ಲಿ ಜಿಲ್ಲಾಡಳಿತದಿಂದ ಧ್ವಜಾರೋಹಣ ನೇರವೇರಿತು.
ಕೋಲಾರ ನಗರದ ವಿವಾದಿತ ಕ್ಲಾಕ್‌ ಟವರ್‌ನಲ್ಲಿ ಜಿಲ್ಲಾಡಳಿತದಿಂದ ಧ್ವಜಾರೋಹಣ ನೇರವೇರಿತು.   

ಕೋಲಾರ: ವಿವಾದಿತ ಕ್ಲಾಕ್‌ ಟವರ್‌ನಲ್ಲಿ ಜಿಲ್ಲಾಡಳಿತದಿಂದ ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ಮೊದಲ ಬಾರಿ ರಾಷ್ಟ್ರ ಧ್ವಜಾರೋಹಣ ನೇರವೇರಿತು.

ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್‌ ಸೋಮವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿದರು.

500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು.

ಸ್ವಾತಂತ್ರ್ಯದ ಅಮೃತಮಹೋತ್ಸವ; ರಾಷ್ಟ್ರ ಧ್ವಜಾರೋಹಣ

ADVERTISEMENT

ಕೋಲಾರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಧ್ವಜಾರೋಹಣ ನೆರವೇರಿಸಿದರು.

ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 23 ತಂಡಗಳಿಂದ ಪಥಸಂಚಲನ ನಡೆಯಿತು.

ಸಚಿವ ಮುನಿರತ್ನ ಸ್ವಾತಂತ್ರ್ಯೋತ್ಸವ ಭಾಣಣ ಮಾಡಿದರು. ಸಂಸದ ಮುನಿಸ್ವಾಮಿ, ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್‌ ಇದ್ದರು.

ಸಾವಿರಾರು ಮಕ್ಕಳು ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದರು.

ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ
ಕೋಲಾರ:
ಸ್ವಾತಂತ್ರ್ಯದ ಅಮೃತಮಹೋತ್ಸವ ಅಂಗವಾಗಿ ದೇಶದಲ್ಲೇ ಅತಿ ದೊಡ್ಡದು ಎನ್ನಲಾದ ತ್ರಿವರ್ಣ ಧ್ವಜವನ್ನು ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಪ್ರದರ್ಶಿಸಲಾಯಿತು.

205x630 ಅಡಿ ವಿಸ್ತೀರ್ಣದ ಧ್ವಜ ಇದಾಗಿದೆ. ಇಡೀ ಕ್ರೀಡಾಂಗಣದ ಉದ್ದಗಲಕ್ಕೆ ಆಗುತ್ತದೆ‌. ಧ್ವಜವು ಒಟ್ಟು 1.29 ಲಕ್ಷ ಚದರ ಅಡಿ ಇದ್ದು, ಅದರಲ್ಲಿ ಅಶೋಕ ಚಕ್ರವೇ 3,600 ಚದರ ಅಡಿ ಹೊಂದಿದೆ. 12,800 ಮೀಟರ್ ಬಟ್ಟೆ ಬಳಸಿದ್ದು, 3,200 ಕೆ.ಜಿ ತೂಕ ಹೊಂದಿದೆ. ಏಳು ಮಂದಿ ಟೈಲರ್‌ಗಳು, 15 ಸಹಾಯಕರು ಹಾಗೂ ಇಬ್ಬರು ಕಲಾವಿದರ ನೆರವಿನಿಂದ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಕೇವಲ ಏಳು ದಿನಗಳಲ್ಲಿ ನಿರ್ಮಿಸಲಾಗಿದೆ.

ಈ ಧ್ವಜಕ್ಕೆ ಸೇನಾ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ ಮಾಡಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.