ಶ್ರೀನಿವಾಸಪುರ: ನಾಲ್ಕನೇ ಬಾರಿಯೂ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂದು ಬೇಸರಗೊಂಡ ವ್ಯಕ್ತಿಯೊಬ್ಬ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ಯಲ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಲೋಕೇಶ್(38) ಎಂಬುವರು ಶನಿವಾರ ರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಾರಿ ಗಂಡು ಮಗು ಹುಟ್ಟುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಲೋಕೇಶ್ ಅವರಿಗೆ ಬೇಸರವಾಗಿತ್ತು ಎಂದು ಮೃತನ ಅಣ್ಣ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.