ADVERTISEMENT

ಬೇತಮಂಗಲ: ಮಕ್ಕಳ ಪೌಷ್ಟಿಕ ಆಹಾರ ಕಾಳಸಂತೆಯಲ್ಲಿ ಮಾರಾಟ!

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2023, 5:21 IST
Last Updated 25 ಫೆಬ್ರುವರಿ 2023, 5:21 IST
ಬೇತಮಂಗಲ 4ನೇ ಬ್ಲಾಕ್‌ನಲ್ಲಿ 250ಕ್ಕೂ ಹೆಚ್ಚು ಆಹಾರ ಪೊಟ್ಟಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು
ಬೇತಮಂಗಲ 4ನೇ ಬ್ಲಾಕ್‌ನಲ್ಲಿ 250ಕ್ಕೂ ಹೆಚ್ಚು ಆಹಾರ ಪೊಟ್ಟಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು   

ಬೇತಮಂಗಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರದ ಮೂಲಕ ಮಕ್ಕಳಿಗೆ ಉಚಿತವಾಗಿ ವಿತರಿಸುವ ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ಖಾಸಗಿ ಅಂಗಡಿಗಳಲ್ಲಿ ಮಾರಾಟ ಮಾಡಲಾಗಿದೆ.

ಈ ಕುರಿತು ಮಾಹಿತಿ ಪಡೆದು ದಾಳಿ ನಡೆಸಿದ ಕೆಜಿಎಫ್ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಾಗರತ್ನ ಅವರು, ಬೇತಮಂಗಲ ಗ್ರಾಮದ ಹಳೆಯ ಬಡಾವಣೆಯ 4ನೇ ಬ್ಲಾಕ್‌ನಲ್ಲಿರುವ ಅಂಗಡಿ ಮತ್ತು ಗೋಡೌನ್‌ಗಳಲ್ಲಿದ್ದ 250ಕ್ಕೂ ಹೆಚ್ಚು ಪೌಷ್ಟಿಕ ಆಹಾರದ ಪೊಟ್ಟಣಗಳನ್ನು ವಶಕ್ಕೆ ಪಡೆದರು. ಜತೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೇತಮಂಗಲ ಪೊಲೀಸರಿಗೆ ಸೂಚಿಸಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಬೇಕಾದ ಪಾಕೆಟ್‍ಗಳು ಖಾಸಗಿ ವ್ಯಕ್ತಿಗಳ ಕೈ ಸೇರುತ್ತಿದೆ. ಅಧಿಕಾರಿಗಳು ಏನೂ ಮಾಡುತ್ತಿದ್ದಾರೆ. ’ ಎಂದು ಭಟ್ರಕುಪ್ಪ ಗ್ರಾಮದ ಅರುಣ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.