ಕೆಜಿಎಫ್: ನಗರ ಹೊರವಲಯದ ರಾಮಾಪುರ ಕೆರೆಯಲ್ಲಿ ಗುರುವಾರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಮಾರಿಕುಪ್ಪಂ ಫಿಟ್ಟರ್ಸ್ ಬ್ಲಾಕ್ ನಿವಾಸಿ ಕೃತಿಕಾ (17) ಮೃತಪಟ್ಟವರು.
ರಾಬರ್ಟಸನ್‌ಪೇಟೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ ಕೃತಿಕಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಳು.
ಅಗ್ನಿಶಾಮಕದಳದ ಸಿಬ್ಬಂದಿ ಶವವನ್ನು ಕೆರೆಯಿಂದ ಹೊರ ತೆಗೆದರು. ಡಿವೈಎಸ್‌ಪಿ ಬಿ.ಕೆ. ಉಮೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು. ಆಂಡರಸನ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.