ADVERTISEMENT

ಕೋಲಾರ: ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರ ನಾಳೆ

ಸಂಪನ್ಮೂಲ ವ್ಯಕ್ತಿಗಳಿಂದ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2023, 5:54 IST
Last Updated 14 ಜುಲೈ 2023, 5:54 IST
ಅಕ್ರಂ ಪಾಷ
ಅಕ್ರಂ ಪಾಷ   

ಕೋಲಾರ: ‘ವಿಶ್ವ ಯುವ ಕೌಶಲ್ಯ’ ದಿನಾಚರಣೆಯ ಪ್ರಯುಕ್ತ ಜುಲೈ 15ರಂದು ಜಿಲ್ಲಾಡಳಿತ, ಕೌಶಲಾಭಿವೃದ್ಧಿ ಇಲಾಖೆ, ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಸಹಭಾಗಿತ್ವದಲ್ಲಿ ಐಎಎಸ್‌, ಕೆಎಎಸ್‌ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರವು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆವರೆಗೆ ಜರುಗಲಿದೆ. ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ ಹಾಗೂ 2016ನೇ ಸಾಲಿನಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ ಪಡೆದ ಜಿಲ್ಲೆಯವರೇ ಆದ ಐಎಎಸ್‌ ಅಧಿಕಾರಿ ಕೆ.ಆರ್‌.ನಂದಿನಿ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

‘ಜಿಲ್ಲೆಗೆ ಹೊಸದಾಗಿ ಬಂದಿರುವ ಜಿಲ್ಲಾ ಪಂಚಾಯಿತಿ ಸಿಇಒ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೂ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಬೆಂಗಳೂರನಿಂದ ಇಬ್ಬರು ಸಂಪನ್ಮೂಲ ವ್ಯಕ್ತಿಗಳು ಬರಲಿದ್ದಾರೆ. ಪರೀಕ್ಷೆಗಳ ಪಠ್ಯಕ್ರಮ, ತಯಾರಿ, ಪರೀಕ್ಷಾ ಹಂತಗಳು ಮುಂತಾದ ಎಲ್ಲಾ ವಿಷಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ’ ಎಂದು ಅಕ್ರಂ ಪಾಷ ಹೇಳಿದರು.

ADVERTISEMENT

ಈ ಕಾರ್ಯಾಗಾರದಲ್ಲಿ ಅಂತಿಮ ವರ್ಷ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಹಾಗೂ ಪದವಿ ಪುರೈಸಿರುವ ಆಸಕ್ತ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಮಧ್ಯಾಹ್ನ ಲಘು ಉಪಾಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತರು ttp://kolar.nic.in/en/notice_category/annuouncements/ ಇಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.