ADVERTISEMENT

ನಾಗಲೇಹಳ್ಳಿ ಶಾಲೆಗೆ ಶಿಕ್ಷಣಾಧಿಕಾರಿಗಳ ಭೇಟಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 14:55 IST
Last Updated 30 ಅಕ್ಟೋಬರ್ 2024, 14:55 IST

ಬೇತಮಂಗಲ: ಇಲ್ಲಿನ ನಾಗಲೇಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟಾಚಾರಿ, ‘ಗ್ರಾಮದಲ್ಲಿ ಶೀಘ್ರವೇ ಶಾಲೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಆದರೆ, ಕನಿಷ್ಠ ಐವರು ವಿದ್ಯಾರ್ಥಿಗಳಾದರೂ ಶಾಲೆಗೆ ದಾಖಲಾತಿ ಇರಬೇಕು’ ಎಂದು ತಿಳಿಸಿದರು. 

ಅಂಬೇಡ್ಕರ್ ಯುವ ವೇದಿಕೆ ಅಧ್ಯಕ್ಷ ಜೈ ಭೀಮ್ ಶ್ರೀನಿವಾಸ್ ಮಾತನಾಡಿ, ಯಾವುದೇ ಒಬ್ಬ ಬಡ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳನ್ನು ಆರಂಭಿಸಿದೆ. ಶಿಕ್ಷಕರನ್ನು ನೇಮಿಸಿ, ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಆದರೆ, ನಾಗಲೇಹಳ್ಳಿಯಲ್ಲಿ ಸುಮಾರು ವರ್ಷಗಳಿಂದ ಸರ್ಕಾರಿ ಶಾಲೆ ತೆರೆಯದ ಕಾರಣ ಬಡ ಮಕ್ಕಳು ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳನ್ನು ಅವಲಂಬಿಸಿದ್ದರು ಎಂದರು. 

ADVERTISEMENT

ಈ ವೇಳೆ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಶಂಕರ್, ಸಂಘಟನಾ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.