ADVERTISEMENT

ಕೋಲಾರ |ಮರು ಮತ ಎಣಿಕೆ: 13ಕ್ಕೆ ತೆರೆಯಲಿದೆ ಇವಿಎಂ ಉಗ್ರಾಣ ಬಾಗಿಲು

ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ: ಕೋರ್ಟ್‌ನಲ್ಲಿ ತಕರಾರು ಅರ್ಜಿ

ಕೆ.ಓಂಕಾರ ಮೂರ್ತಿ
Published 10 ಆಗಸ್ಟ್ 2024, 21:12 IST
Last Updated 10 ಆಗಸ್ಟ್ 2024, 21:12 IST
ಇವಿಎಂ ( ಸಾಂದರ್ಭಿಕ ಚಿತ್ರ)
ಇವಿಎಂ ( ಸಾಂದರ್ಭಿಕ ಚಿತ್ರ)   

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶದ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಕೇಳಿರುವ ದಾಖಲೆ ಸಲ್ಲಿಸಲು ಆಗಸ್ಟ್‌ 13ರಂದು ಇವಿಎಂ ಉಗ್ರಾಣದ ಬಾಗಿಲು ತೆರೆಯಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿರುವ ಇವಿಎಂ ಉಗ್ರಾಣದ ಬಾಗಿಲು ತೆರೆಯಲು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಅನುಮತಿ ನೀಡಿದ್ದಾರೆ.

ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಮಂಗಳವಾರ ಮಾಲೂರು ಕ್ಷೇತ್ರಕ್ಕೆ ಸಂಬಂಧಿಸಿದ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಸಂದರ್ಭದಲ್ಲಿ ಸಂಗ್ರಹಿಸಿಟ್ಟರುವ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಕ್ರಂ ಪಾಷಾ ‘ಪ್ರಜಾವಾಣಿ’ಗೆ ತಿಳಿಸಿದರು. 

ADVERTISEMENT

ಅಂದು ಸ್ಥಳದಲ್ಲಿ ಹಾಜರಿರುವಂತೆ ಬಿಜೆಪಿ, ಕಾಂಗ್ರೆಸ್‌, ಬಿಎಸ್‌ಪಿ, ಸಿಪಿಎಂ, ಆಮ್‌ ಆದ್ಮಿ ಪಾರ್ಟಿ, ಜೆಡಿಎಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಈಗಾಗಲೇ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ.

2023ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ 50,955 ಮತ ಹಾಗೂ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಎಸ್‌. ಮಂಜುನಾಥ್‌ ಗೌಡ 50,707 ಮತ ಗಳಿಸಿದ್ದರು. ನಂಜೇಗೌಡ ಕೇವಲ 248 ಮತಗಳಿಂದ ಗೆದ್ದಿದ್ದರು. ಮರು ಮತ ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಮಂಜುನಾಥ್‌ ಗೌಡ ಕೋರ್ಟ್‌ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಈಗ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.