ADVERTISEMENT

‘ಕೆ.ಸಿ ವ್ಯಾಲಿಯಿಂದ ಅಂತರ್ಜಲ ವೃದ್ಧಿ’

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 8:53 IST
Last Updated 20 ಸೆಪ್ಟೆಂಬರ್ 2021, 8:53 IST
ಕೋಲಾರ ತಾಲ್ಲೂಕಿನ ವಕ್ಕಲೇರಿ ಗ್ರಾಮದಲ್ಲಿ ಭಾನುವಾರ ಶಾಸಕ ಕೆ.ಶ್ರೀನಿವಾಸಗೌಡ ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್‌ ವಿತರಣೆ ಮಾಡಿದರು. ಕೆ.ವಿ.ಸುರೇಶ್‌ಕುಮಾರ್‌, ನಾಗನಾಳ ಸೋಮಣ್ಣ, ಪಾಲಾಕ್ಷಗೌಡ ಇದ್ದರು
ಕೋಲಾರ ತಾಲ್ಲೂಕಿನ ವಕ್ಕಲೇರಿ ಗ್ರಾಮದಲ್ಲಿ ಭಾನುವಾರ ಶಾಸಕ ಕೆ.ಶ್ರೀನಿವಾಸಗೌಡ ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್‌ ವಿತರಣೆ ಮಾಡಿದರು. ಕೆ.ವಿ.ಸುರೇಶ್‌ಕುಮಾರ್‌, ನಾಗನಾಳ ಸೋಮಣ್ಣ, ಪಾಲಾಕ್ಷಗೌಡ ಇದ್ದರು   

ಕೋಲಾರ: ಕೆ.ಸಿ ವ್ಯಾಲಿ ನೀರಿನಿಂದ ಅಂತರ್ಜಲ ಅಭಿವೃದ್ಧಿಯಾಗುತ್ತಿದೆ. ರೈತರ ಬದುಕು ಹಸನಾಗುತ್ತಿದೆ. ವಿರೋಧ ಮಾಡದೆ ಸತ್ಯವನ್ನು ಒಪ್ಪಿಕೊಳ್ಳಬೇಕು ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

ವಕ್ಕಲೇರಿ ಗ್ರಾಮದ ವಿದ್ಯಾಭಿವೃದ್ಧಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ಕಟ್ಟಡ ಕಾರ್ಮಿಕರಿಗೆ
ದಿನಸಿ ಕಿಟ್ ವಿತರಣೆ ಮಾಡಿ ಮಾತನಾಡಿ, ಕೆಸಿ ವ್ಯಾಲಿಯಿಂದ ಕೆರೆಗಳಲ್ಲಿ ನೀರು ತುಂಬಿದೆ. ರೈತರು ಸಂತಸದಿಂದ ಇದ್ದಾರೆ. ವಿರೋಧ ಮಾಡುವುದುದೊಡ್ಡಸ್ತಿಕೆ ಅಲ್ಲ ಎಂದು ಹೇಳಿದರು.

ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಎಸ್‌.ಎಂ.ಕೃಷ್ಣ ಅವರ ಅಧಿಕಾರಾವಧಿಯಲ್ಲಿ ಮಂತ್ರಿಯಾಗಿದ್ದೆ. ಎಂದಿಗೂ ನನ್ನ ಮೇಲೆ ಭ್ರಷ್ಟಾಚಾರ ಆರೋಪ ಬಂದಿಲ್ಲ. ಕೋಮುಗಲಭೆಗೆ ಅವಕಾಶ ಮಾಡಿಕೊಟ್ಟಿಲ್ಲ. ಸಿ.ಬೈರೇಗೌಡ ಮತ್ತು ವೆಂಕಟಗಿರಿಯಪ್ಪ ಅವರ ಹಾದಿಯಲ್ಲಿಯೇ ಸಾಗುತ್ತಿದ್ದೇನೆ. ಎಲ್ಲ ವರ್ಗದವರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿದ್ದೇನೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಹೋಗುವಾಗ ಕೂಡ ಎಲ್ಲ ಮುಖಂಡರ ವಿಶ್ವಾಸವನ್ನು ಪಡೆದುಕೊಳ್ಳುತ್ತೇನೆ ಎಂದರು.

ADVERTISEMENT

ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್ ಕುಮಾರ್‌ ಮಾತನಾಡಿ, ಕಟ್ಟಡ ಕಾರ್ಮಿಕರು ಗುರುತಿನ ಚೀಟಿ ನವೀಕರಣ ಮಾಡದೆ ಇದ್ದರೆ ಈಗಲೂ ಮಾಡಿಕೊಳ್ಳಬಹುದು. ಸರ್ಕಾರ ಅವಕಾಶ ನೀಡಿದೆ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಸಹಕಾರ ನೀಡಬೇಕು ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗನಾಳ ಸೋಮಣ್ಣ, ಪಾಲಾಕ್ಷಗೌಡ, ಚಂದ್ರೇಗೌಡ, ಚಿದಾನಂದ, ಮಂಜುನಾಥ್, ಮುಖಂಡರಾದ ಕೃಷ್ಣಪ್ಪ, ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.