ADVERTISEMENT

ಶ್ರೀನಿವಾಸಪುರ | ಅಕ್ರಮವಾಗಿ ಪಟಾಕಿ ಸಂಗ್ರಹ; ದಾಳಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 14:09 IST
Last Updated 27 ಅಕ್ಟೋಬರ್ 2024, 14:09 IST
ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಬಾಕ್ಸ್‌ಗಳನ್ನು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ವಶಕ್ಕೆ ಪಡೆದರು
ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಬಾಕ್ಸ್‌ಗಳನ್ನು ತಹಶೀಲ್ದಾರ್ ಜಿ.ಎನ್.ಸುಧೀಂದ್ರ ವಶಕ್ಕೆ ಪಡೆದರು   

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಬಾಕ್ಸ್‌ಗಳನ್ನು ಭಾನುವಾರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀರಾಮಪ್ಪ ಎಂಬುವವರು ದೀಪಾವಳಿ ಹಬ್ಬದ ಪ್ರಯುಕ್ತ ಚೀಟಿ ಹಾಕಿದ ಗ್ರಾಹಕರಿಗೆ ಪಟಾಕಿ ನೀಡಲು 100 ಬಾಕ್ಸ್‌ಗಳ ಗೋದಾಮಿನಲ್ಲಿ ಇರಿಸಿದ್ದರು.

ಖಚಿತ ಮಾಹಿತಿಯ ಮೇರೆಗೆ ಗೋದಾಮಿನ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಇರಿಸಿದ್ದ ಪಟಾಕಿ ಬಾಕ್ಸ್‌ಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಸುಧೀಂದ್ರ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.