ಕೋಲಾರ: ಕೋಲಾರ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಈ ಮೊದಲಿನ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಅವರನ್ನು ವರ್ಗಾವಣೆ ಮಾಡಲಾಗಿದೆ. ನಿಖಿಲ್ ಅವರು ಈ ಮೊದಲು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ನಾರಾಯಣ ಅವರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.