ಮುಳಬಾಗಿಲು: ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ರೂಪಿಸಿರುವ ಲ್ಯಾಪ್‌ಟಾಪ್ ವಿತರಣೆ ಯೋಜನೆಯಡಿ ತಾಲ್ಲೂಕಿನ 33 ಮಂದಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶನಿವಾರ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.
ತಾಲ್ಲೂಕಿನ ಕಟ್ಟಡ ಕಾರ್ಮಿಕರ ಮಕ್ಕಳು ಈಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಶೇ ಶೇ67ಕ್ಕಿಂತಲೂ ಹೆಚ್ಚು ಅಂಕ ಪಡೆದಿರುವ 33 ಮಂದಿ ವಿದ್ಯಾರ್ಥಿಗಳಿಗೆ ಶಾಸಕ ಸಮೃದ್ಧಿ ಮಂಜುನಾಥ್ ಲ್ಯಾಪ್‌ಟಾಪ್ ವಿತರಿಸಿದರು.
ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಅನೇಕ ಬಗೆ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ವಿದ್ಯಾರ್ಥಿಗಳು ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಅತ್ಯುತ್ತಮ ಅಂಕ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.
ತಹಶೀಲ್ದಾರ್ ಟಿ.ರೇಖಾ, ಗ್ರೇಡ್- 2 ತಹಶೀಲ್ದಾರ್ ಬಿ.ಆರ್.ಮುನಿವೆಂಕಟಪ್ಪ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಸರ್ವೇಶ್, ನಗರಸಭೆ ಪೌರಾಯುಕ್ತ ವಿ.ಶ್ರೀಧರ್,ಕಾರ್ಮಿಕ ಇಲಾಖೆ ನಿರೀಕ್ಷಕಿ ಆಶಾರಾಣಿ, ಕಟ್ಟಡ ಕಾರ್ಮಿಕ ಸಂಘದ ಸದಸ್ಯೆ ಸುಧಾ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.