ADVERTISEMENT

ನಂಗಲಿ ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 13:58 IST
Last Updated 8 ಅಕ್ಟೋಬರ್ 2024, 13:58 IST
ಮುಳಬಾಗಿಲು ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ
ಮುಳಬಾಗಿಲು ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ   

ಮುಳಬಾಗಿಲು: ತಾಲ್ಲೂಕಿನ ನಂಗಲಿ ಆರ್‌ಟಿಒ ಕಚೇರಿ ಮೇಲೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದರು.

ಬೆಂಗಳೂರು ಲೋಕಾಯುಕ್ತ ಡಿವೈಎಸ್‌ಪಿ ಪ್ರದೀಪ್ ನೇತೃತ್ವದಲ್ಲಿ 13 ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು. ಒಟ್ಟು ₹10 ಸಾವಿರ ವಸೂಲಿಯಾಗಿದ್ದರೆ, ಲೆಕ್ಕವಿಲ್ಲದ ₹24,500 ಅನ್ನು ಅಧಿಕಾರಿಗಳು ವಶಕ್ಕೆ ಪಡೆದರು.

ನಂಗಲಿ ಆರ್‌ಟಿಒ ಕಚೇರಿಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರಿಂದ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಯಾವುದೇ ಮುನ್ಸೂಚನೆ ನೀಡದೆ, ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.