ADVERTISEMENT

ಕೆಜಿಎಫ್‌ | ಪಂಚಾಯಿತಿಯಲ್ಲಿ ಸರಸ, ಸಲ್ಲಾಪ: ಬಿಲ್‌ ಕಲೆಕ್ಟರ್‌ ಬಂಧನ

​ಪ್ರಜಾವಾಣಿ ವಾರ್ತೆ
Published 14 ಮೇ 2024, 15:57 IST
Last Updated 14 ಮೇ 2024, 15:57 IST
ಅರ್ಜುನ್‌ ಹರಿಕೃಷ್ಣ
ಅರ್ಜುನ್‌ ಹರಿಕೃಷ್ಣ   

ಕೆಜಿಎಫ್‌: ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜತೆ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಹಂಚಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಅವರನ್ನು ಬೇತಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ.

ADVERTISEMENT

ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. 

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೋದಾಗ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯಿತು.

ತನ್ನ ಮಗನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗದಂತೆ ಆರೋಪಿಯ ತಾಯಿ ಪೊಲೀಸರ ಜೀಪ್‌ ಮುಂದೆ ಅಡ್ಡಲಾಗಿ ಮಲಗಿ ತಡೆ ಒಡ್ಡಿದರು. ಕೊನೆಗೆ ಪೊಲೀಸರು ಅವರನ್ನು ಪಕ್ಕಕ್ಕೆ ಸರಿಸಿ ಆರೋಪಿಯನ್ನು ಕರೆದೊಯ್ದರು.

ಈ ಪ್ರಕರಣದ ತನಿಖೆಯನ್ನು ಸೈಬರ್ ಇನ್‌ಸ್ಪೆಕ್ಟರ್ ಲಕ್ಷ್ಮಿನಾರಾಯಣ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಮಸಾಗರ ಗ್ರಾಮ ಪಂಚಾಯಿತಿಯ 14 ಸದಸ್ಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಹರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಆರೋಪಿ ಮತ್ತು ಸಂತ್ರಸ್ತೆಯನ್ನು ಸೇವೆಯಿಂದ ಅಮಾನತು ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿರುವುದಾಗಿ ಹರ್ತಿ ತಿಳಿಸಿದ್ದಾರೆ.

ಖಾಸಗಿ ಕ್ಷಣಗಳ ಚಿತ್ರೀಕರಣವಾದ ಕೊಠಡಿಯ ಸಿಸಿಟಿವಿ ಕ್ಯಾಮೆರಾ ವೈರ್‌ಗಳನ್ನು ತೆಗೆದಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.