ADVERTISEMENT

ವಿದ್ಯಾರ್ಥಿಗಳೊಂದಿಗೆ ನೃತ್ಯಕ್ಕೆ ಹೆಜ್ಜೆ ಹಾಕಿದ ಶಾಸಕ ಸಮೃದ್ಧಿ ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 14:28 IST
Last Updated 2 ಜುಲೈ 2024, 14:28 IST
<div class="paragraphs"><p>ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ವಿದ್ಯಾರ್ಥಿಗಳ ಜತೆ ನೃತ್ಯ ಮಾಡಿದರು</p></div>

ಮುಳಬಾಗಿಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ವಿದ್ಯಾರ್ಥಿಗಳ ಜತೆ ನೃತ್ಯ ಮಾಡಿದರು

   

ಮುಳಬಾಗಿಲು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕಾಲೇಜು ವಾರ್ಷಿಕೋತ್ಸವ ನಡೆಯಿತು.

ಕಾರ್ಯಕ್ರಮದ ಪ್ರಯುಕ್ತ ನೃತ್ಯ, ಹಾಡುಗಾರಿಕೆ, ನಾಟಕ ಸೇರಿದಂತೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು. ಜತೆಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ವಿದ್ಯಾರ್ಥಿಗಳು ವೇದಿಕೆ ಮೇಲೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ನೃತ್ಯ ಪ್ರಾರಂಭಿಸುತ್ತಿದ್ದಂತೆ, ಶಾಸಕ ಸಮೃದ್ಧಿ ಮಂಜುನಾಥ್ ಅವರು ವೇದಿಕೆಯ ಮೇಲೆ ವಿದ್ಯಾರ್ಥಿಗಳ ಜೊತೆಗೂಡಿ ಹಾಡಿಗೆ ಭರ್ಜರಿ ನೃತ್ಯ ಮಾಡಿದರು.

ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇತ್ತೀಚಿಗೆ ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನೆನಪಿನಲ್ಲಿ ಉಳಿಯುವಂತಹ ಸಾಧನೆಗಳನ್ನು ಬಿಟ್ಟು ಹೋಗಬೇಕು. ಆ ಸಾಧನೆಗಳು ಮುಂದೆ ಬರುವ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕು. ಆದ್ದರಿಂದ ದೊಡ್ಡ ಕನಸುಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳು ಓದಬೇಕು ಎಂದು ಹೇಳಿದರು.

ಕಾಲೇಜಿನಲ್ಲಿ ನೀರಿನ ಸಮಸ್ಯೆ ಇರುವುದರಿಂದ ಒಂದು ತಿಂಗಳಲ್ಲಿ ಕೊಳವೆ ಬಾವಿ ಕೊರೆಸಲಾಗುವುದು. ಎರಡು ತಿಂಗಳಲ್ಲಿ ಹೈಟೆಕ್ ಮಾದರಿಯ ಕಾಲೇಜು ಕ್ಯಾಂಟೀನ್ ಹಾಗೂ ಕಾಫಿ ಡೇ ಉದ್ಘಾಟನೆ ಮಾಡಲಾಗುವುದು ಎಂದರು.

ಜಿ.ಮುನಿವೆಂಕಟಪ್ಪ, ರಘುಪತಿ ರೆಡ್ಡಿ, ನಗವಾರ ಎನ್.ಆರ್.ಎಸ್.ಸತ್ಯಣ್ಣ, ಗೊಲ್ಲಹಳ್ಳಿ ಜಗಯ್, ಪ್ರಸಾದ್, ರಾಜಶೇಖರ್, ರಾಜೇಶ್, ಗ್ಯಾಸ್ ರಘು, ಎಂ.ಕೃಷ್ಣಪ್ಪ, ಟಿ.ಎಸ್.ಶ್ರೀನಿವಾಸ್, ಎಂ.ಎನ್.ಮೂರ್ತಿ, ಮೋಹನ ರೆಡ್ಡಿ, ಶಿವರಾಮೇಗೌಡ, ಆದಿನಾರಾಯಣ, ಲಾರೆನ್ಸ್ ಪ್ರಸನ್ನ, ವಸುಂದರಾ, ಭಾಗ್ಯಲಕ್ಷ್ಮಿ, ಶಶಿಕಳಾ, ಶ್ರೀಧರ್, ಎಲ್.ಸೀನಪ್ಪ ಮತ್ತಿತರರು ಇದ್ದರು.

ಕಾಲೇಜು ವಾರ್ಷಿಕೋತ್ಸವವನ್ನು ಗಣ್ಯರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.