ADVERTISEMENT

‘ನಿನ್ನ ಗಂಡ ಬದುಕಿದ್ದಾನೆ ತಾನೇ’– ಹಣೆಗೆ ಬೊಟ್ಟು ಇಟ್ಟುಕೊಂಡಿಲ್ಲವೆಂದು ಮಹಿಳೆಯ ನಿಂದಿಸಿದ ಸಂಸದ ಮುನಿಸ್ವಾಮಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2023, 16:15 IST
Last Updated 8 ಮಾರ್ಚ್ 2023, 16:15 IST

ಮಹಿಳೆಯೊಬ್ಬರು ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲವೆಂದು ಅವರನ್ನು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವಾದ ಬುಧವಾರ ಸಂಸದ ಎಸ್‌.ಮುನಿಸ್ವಾಮಿ ನಿಂದಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಮಹಿಳಾ ದಿನಾಚರಣೆ ವೇಳೆ ನಡೆದ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ‘ಸುಜಾತಾ ಎಂಬ ಹೆಸರು ಇಟ್ಟುಕೊಂಡಿದ್ದೀಯಾ? ನಿನ್ನ ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್‌ಸೆನ್ಸ್ ಇಲ್ಲ. ಯಾರೋ ಕಾಸು ಕೊಡುತ್ತಾರೆಂದು ಮತಾಂತರವಾಗಿಬಿಡುತ್ತೀರಾ’ ಎಂದು ಹರಿಹಾಯ್ದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT