ADVERTISEMENT

ಕೆಜಿಎಫ್‌: ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 16:49 IST
Last Updated 1 ಸೆಪ್ಟೆಂಬರ್ 2024, 16:49 IST
ಕೆಜಿಎಫ್ ಮಾರಿಕುಪ್ಪಂನಲ್ಲಿ ಪೌಷ್ಟಿಕ ಆಹಾರ ಕುರಿತು ಜಾಗೃತಿ ಕಾರ್ಯಕ್ರಮ ಆಚರಿಸಲಾಯಿತು 
ಕೆಜಿಎಫ್ ಮಾರಿಕುಪ್ಪಂನಲ್ಲಿ ಪೌಷ್ಟಿಕ ಆಹಾರ ಕುರಿತು ಜಾಗೃತಿ ಕಾರ್ಯಕ್ರಮ ಆಚರಿಸಲಾಯಿತು    

ಕೆಜಿಎಫ್‌: ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಕೆಜಿಎಫ್, ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಆಯೋಜಿಸಲಾಯಿತು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ವಿನೋದ ಕುಮಾರ್, ‘ಮಹಿಳೆಯರ ಆರೋಗ್ಯ ಮತ್ತು ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರಗಳ ಅಗತ್ಯವಿದೆ’ ಎಂದು ಹೇಳಿದರು. 

ಎನ್‌ಬಿಎಂ ಪ್ಲಾನಿಟೇಷನ್ ಏರಿಯಾ ಪೌಷ್ಟಿಕ ಆಹಾರ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ ಮೊದಲ ವಾರ (1 ರಿಂದ 7ರವರೆಗೆ) ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಆಚರಿಸಲಾಗುತ್ತದೆ. ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ ಹಾಗೂ ಅವುಗಳ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಲಭಿಸುವ ಲಾಭದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ADVERTISEMENT

ಪೌಷ್ಟಿದಾಯಕ ಆಹಾರಗಳ ಸೇವನೆ ಕೊರತೆಯಿಂದ ಅಪೌಷ್ಟಿಕತೆ ಕಾರಣದಿಂದ ಜಗತ್ತಿನಲ್ಲಿ ಅನೇಕ ಮಕ್ಕಳು ಮೃತಪಟ್ಟಿರುವ ಘಟನೆಗಳು ಸಂಭವಿಸುತ್ತಲೇ ಇವೆ.  ಆರೋಗ್ಯಕರ ಜೀವನಶೈಲಿ ಪಾಲಿಸಲು ಪ್ರತಿಯೊಬ್ಬರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು. ಅಲ್ಲದೆ, ಬಲವಾದ ರೋಗನಿರೋಧಕ ಶಕ್ತಿ ಕಾಪಾಡಿಕೊಳ್ಳಲು ವ್ಯಕ್ತಿ ಸೇವಿಸುವ ಆಹಾರದಲ್ಲಿ ಪೋಷಕಾಂಶಗಳು ಇರಲೇಬೇಕು. ಒಬ್ಬ ವ್ಯಕ್ತಿಯು ಅಗತ್ಯವಿರುವ ಪೋಷಕಾಂಶ ಪಡೆಯಲು ಪ್ರತಿದಿನ ಕಾರ್ಬೋಹೈಡ್ರೇಟ್, ಫೈಬರ್, ಆರೋಗ್ಯಕರ ಕೊಬ್ಬು, ಪ್ರೋಟಿನ್, ಖನಿಜಗಳು, ವಿಟಮಿನ್‌ಗಳಲ್ಲಿ ಸಮೃದ್ಧವಾದ ಆಹಾರ ಸೇವಿಸಬೇಕು. ಆಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಈ ಕಾರಣದಿಂದ ಆರೋಗ್ಯಕರ ಆಹಾರಪದ್ಧತಿ ಮತ್ತು ಸರಿಯಾದ ಪೋಷಣೆಯ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಈ ವೇಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಜೇಶ್ ಎಸ್.ಟಿ ಮಾತನಾಡಿ, ‘ಮನುಷ್ಯನ ಉತ್ತಮ ಆರೋಗ್ಯಕ್ಕೆ ಪೋಷಕಾಂಶಗಳು ಬೇಕೇಬೇಕು. ಆರೋಗ್ಯಕರ ಮತ್ತು ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ ಶಿಕ್ಷಣ ನೀಡಲು ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಆಚರಿಸಲಾಗುತ್ತದೆ’ ಎಂದು

ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಗಣಪತಿ ಗುರುಸಿದ್ಧ ಬಾದಾಮಿ, ಶೆಮಿದ, ವಕೀಲರ ಸಂಘ ಅಧ್ಯಕ್ಷ ಎಸ್.ಎನ್. ರಾಜಗೋಪಾಲ ಗೌಡ, ಉಪಾಧ್ಯಕ್ಷ ಬಿ. ಮಣಿವಣ್ಣನ್, ಕಾರ್ಯದರ್ಶಿ ಕೆ. ಸಿ. ನಾಗರಾಜ್ ಭಾಗವಹಿಸಿದ್ದರು.

ಕೆ ಜಿ ಎಫ್ ಮಾರಿಕುಪ್ಪಂ ನಲ್ಲಿ ಪೌಷ್ಟಿಕ ಆಹಾರ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.