ಕೋಲಾರ: ವರ್ಗಾವಣೆ ಇಲ್ಲದೆ ಕಳೆದೆರಡು ವರ್ಷಗಳಿಂದ ಸಮಸ್ಯೆ ಸಿಲುಕಿದ್ದ ಶಿಕ್ಷಕರ ನೋವಿಗೆ ಸ್ಪಂದಿಸಿ ವರ್ಗಾವಣೆಗೆ ಸುಗ್ರೀವಾಜ್ಞೆ ತಂದಿರುವ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಧನ್ಯವಾದ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಸರ್ಕಾರದ ಮೇಲೆ ಒತ್ತಡ ತಂದು ವರ್ಗಾವಣೆಗೆ ಸುಗ್ರೀವಾಜ್ಞೆ ತರುವಂತೆ ಮಾಡಿದ್ದಾರೆ. ವರ್ಗಾವಣೆಗಾಗಿ ಕಾತರದಿಂದ ಕಾಯುತ್ತಿದ್ದ ಶಿಕ್ಷಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಶಿಕ್ಷಕರ ನೋವಿಗೆ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸ್ಪಂದಿಸಿದ್ದಾರೆ ಎಂದು ಸುರೇಶ್‌ಬಾಬು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸಿಕ್ಕಿದೆ. ಒಂದೆರಡು ದಿನದಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆ ಮೂಲಕ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅನುಮೋದನೆ ದೊರೆತ ನಂತರ ಶಿಕ್ಷಕರ ವರ್ಗಾವಣೆ ಸಂಬಂಧ ಆದೇಶ ಹೊರ ಬೀಳಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.