ADVERTISEMENT

ಮುಳಬಾಗಿಲು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 5:32 IST
Last Updated 22 ಜೂನ್ 2024, 5:32 IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಮುಳಬಾಗಿಲಿನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವತಿಯಿಂದ ಮುಳಬಾಗಿಲಿನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು   

ಮುಳಬಾಗಿಲು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯನ್ನು ಖಂಡಿಸಿ ತಾಲ್ಲೂಕು ಬಿಜೆಪಿ ವತಿಯಿಂದ ನಗರದ ಟಿಎಪಿಸಿಎಂಎಸ್ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್ ಬಿ.ಆರ್.ಮುನಿವೆಂಕಟಪ್ಪ ಮುಖಾಂತರ ರಾಜ್ಯಪಾಲರಿಗೆ ಮನವಿ ನೀಡಿದರು.

ಈ ವೇಳೆ ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಕೆ.ವಾಸುದೇವ್ ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತಕ್ಕೆ ಬಂದಾಗಿನಿಂದ ಜನರ ಆಶೋತ್ತರ ಈಡೇರಿಸುವ ನಿಟ್ಟಿನಲ್ಲಿ ಯಾವುದೇ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿಲ್ಲ. ಬದಲಾಗಿ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಬಡಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಸರ್ಕಾರಿ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ, ದಿನನಿತ್ಯದ ವಸ್ತುಗಳ ಬೆಲೆ ಹೆಚ್ಚಳ, ಬಿತ್ತನೆ ಬೀಜದ ಬೆಲೆ ಏರಿಕೆ ಹೀಗೆ ನಿತ್ಯ ಬಳಕೆಯ ಸಾಮಾಗ್ರಿಗಳನ್ನು ಏರಿಸಿದ್ದಲ್ಲದೆ, ಈಗ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ತಿಳಿಸಿದರು.

ADVERTISEMENT

ನಗರ ಘಟಕದ ಅಧ್ಯಕ್ಷ ಕಾಪರ್ತಿ ಅಮರ್ ಮಾತನಾಡಿ, ಹಲವಾರು ಭಾಗ್ಯಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡಜನತೆಗೆ ತುಂಬಾ ಅನ್ಯಾಯ ಮಾಡುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಸಂಬಂಧಿಸಿದ ಪ್ರೋತ್ಸಾಹಧನವನ್ನು ತಮ್ಮ ಸ್ವಾರ್ಥಕ್ಕೆ ಬಳಿಸಿಕೊಂಡಿದೆ ಎಂದು ಆರೋಪಿಸಿದರು.

ಗ್ರಾಮಾಂತರ ಅಧ್ಯಕ್ಷ ಮೈಸೂರು ಸುರೇಶ್ ರಾಜು ಮಾತನಾಡಿ, ಕಾಂಗ್ರೆಸ್ ಪಕ್ಷ ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರಣವಾಗಿದ್ದು ಇಬ್ಬರೂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪಿ.ಎಂ.ಕೃಷ್ಣಮೂರ್ತಿ, ಮೈಕ್ ಶಂಕರ್, ವಿಶ್ವನಾಥ್, ಮಲ್ಲೇಕುಪ್ಪ ಸೋಮಶೇಖರ್, ದೊಡ್ಡಗಾನಹಳ್ಳಿ ಮಂಜುನಾಥ್, ಕಲ್ಲುಪಲ್ಲಿ ಮೋಹನ್, ಸತೀಶ್ ಕುಮಾರ್, ಶ್ರೀನಿವಾಸ್, ಪ್ರಕಾಶ್‍ರೆಡ್ಡಿ, ಸುರೇಶ್, ಆರ್.ಶ್ರೀನಿವಾಸ್, ಆಂಜನೇಯಲು, ವಿಶ್ವನಾಥ ರೆಡ್ಡಿ, ಮುನಿರಾಜು, ಜಯಪ್ಪ, ಆದಿನಾರಾಯಣ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.