ADVERTISEMENT

ಮಾಲೂರು: ರೈಲ್ವೆ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 15:34 IST
Last Updated 27 ನವೆಂಬರ್ 2023, 15:34 IST
ಲೋಕೋಪಯೋಗಿ ಇಲಾಖೆ ವತಿಯಿಂದ ಮಾಲೂರು ಪಟ್ಟಣದ ರೈಲ್ವೆ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದು
ಲೋಕೋಪಯೋಗಿ ಇಲಾಖೆ ವತಿಯಿಂದ ಮಾಲೂರು ಪಟ್ಟಣದ ರೈಲ್ವೆ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದು   

ಮಾಲೂರು: ಶಿಥಿಲಗೊಂಡಿದ್ದ ಪಟ್ಟಣದ ರೈಲ್ವೆ ಮೇಲ್ಸೇತುವೆ ರಸ್ತೆ ದುರಸ್ತಿಗೆ ಪಿಡಬ್ಲ್ಯೂಡಿ ಇಲಾಖೆ ಮುಂದಾಗಿದ್ದು, ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾಲೂರು-ಹೊಸೂರು ರಸ್ತೆಯ ರೈಲ್ವೆ ಮೇಲ್ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಪ್ರಜಾವಾಣಿ ಆಗಸ್ಟ್ 14ರ ಸಂಚಿಕೆಯಲ್ಲಿ ‘ಕುಸಿಯುವ ಸ್ಥಿತಿಯಲ್ಲಿ ರೈಲ್ವೆ ಮೇಲ್ಸೇತುವೆ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.

ದುರಸ್ತಿ ಕಾಮಗಾರಿ ಆರಂಭವಾಗಿದೆ. ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಾಗಿರುವುದರಿಂದ ರಾತ್ರಿ 10 ಗಂಟೆ ನಂತರ ಕಾಮಗಾರಿ ನಡೆಸಲಾಗುವುದು. ಈ ಬಗ್ಗೆ ಸರ್ಕಾರಕ್ಕೂ ವರದಿ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಎಂಜನಿಯರ್ ರಾಜಗೋಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.