ಬೇತಮಂಗಲ: ಕಮ್ಮಸಂದ್ರ ಗ್ರಾಮದ ಕೋಟಿಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ ದೇವಾಲಯಕ್ಕೆ ಭಕ್ತಾರ ದಂಡು ಹರಿದು ಬಂದಿತ್ತು.
ಕೋಟಿಲಿಂಗೇಶ್ವರ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ಕೆ.ವಿ.ಕುಮಾರಿ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಕೋಟಿ ಲಿಂಗಗಳಿಗೆ ಅರಿಸಿನ ಕುಂಕುಮ ಹಾಗೂ ಹೂವುಗಳಿಂದ ಅಲಂಕರಿಸಲಾಗಿತ್ತು. ದೇವಾಲಯದ ಆವರಣದಲ್ಲಿ ನೆಲೆಸಿರುವ ಎಲ್ಲಾ ದೇಗುಲಗಳ ದೇವರ ಮೂರ್ತಿಗಳಿಗೂ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ನಡೆಯಿತು. ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತಮಿಳು ನಾಡು ಸೇರಿದಂತೆ ವಿವಿಧ ಕಡೆಗಳಿಂದ ಭಕ್ತರು ಭೇಟಿ ನೀಡಿ ದೇವರ ಕೃಪೆಗೆ ಪಾತ್ರರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.