ಮುಳಬಾಗಿಲು: ‘ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಶಾಸಕ ಎಚ್. ನಾಗೇಶ್ ತಿಳಿಸಿದರು.
ನಗರದ ಡಿವಿಜಿ ರಂಗಮಂದಿರದಲ್ಲಿ ಜನಸಮೂಹ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮಿತಿಯಿಂದ ಕಾರ್ಮಿಕರಿಗೆ ನೋಂದಣಿ, ಗುರುತಿನ ಚೀಟಿ ವಿತರಿಸಿ ಅವರು ಮಾತನಾಡಿದರು.
ಪ್ರತಿ ಕಾರ್ಮಿಕರು ತಪ್ಪದೇ ಹೆಸಸು ನೋಂದಾಯಿಸಿಕೊಳ್ಳಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.
ತಾ.ಪಂ. ಮಾಜಿ ಅಧ್ಯಕ್ಷ ಎ.ವಿ. ಶ್ರೀನಿವಾಸ್, ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ.ಸಂಗಸಂದ್ರ ವಿಜಯಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ, ದರಖಾಸ್ತು ಸಮಿತಿ ಸದಸ್ಯ ಪೆದ್ದಪ್ಪಯ್ಯ, ಬಹುಜನ ಚಳವಳಿ ಜಿಲ್ಲಾ ಸಂಘಟನಾ ಸಂಚಾಲಕ ಜಮ್ಮನಹಳ್ಳಿ ಜಗದೀಶ್, ರೈತ ಮತ್ತು ಕೃಷಿ ಕಾರ್ಮಿಕರ ಸಮಿತಿಯ ಜಿಲ್ಲಾ ಅಧ್ಯಕ್ಷ ರಮೇಶ್, ಕನ್ನಡ ರಕ್ಷಣಾ ಸೇನೆ ಜಿಲ್ಲಾ ಅಧ್ಯಕ್ಷ ಚಲಪತಿ, ಉಪಾಧ್ಯಕ್ಷ ಕರಡಗೂರು ರಾಮಣ್ಣ, ಪ್ರಧಾನ ಕಾರ್ಯದರ್ಶಿ ಪಳನಿ, ಶ್ಯಾಮಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.