ADVERTISEMENT

ಮುಳಬಾಗಿಲು: ಅನುಮಾನಾಸ್ಪದವಾಗಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 14:03 IST
Last Updated 25 ಸೆಪ್ಟೆಂಬರ್ 2024, 14:03 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ 75ರ ಸೊಣ್ಣವಾಡಿ ಮೇಲ್ಸೇತುವೆ ಬಳಿ ಬುಧವಾರ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ADVERTISEMENT

ಮುಳಬಾಗಿಲು ನಗರದ ಪಳ್ಳಿಗರ ಪಾಳ್ಯದ ಸುಶೀಲಮ್ಮ(42) ಮೃತರು. ಇವರಿಗೆ ಪತಿ ಮತ್ತು ಒಬ್ಬ ಮಗಳು ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆಯ ಇನ್‌ಸ್ಪೆಕ್ಟರ್ ರಾಜಣ್ಣ ಪರಿಶೀಲನೆ ನಡೆಸಿದರು. ಹೆಚ್ಚಿನ ತಪಾಸಣೆಗಾಗಿ ಶವವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.