ADVERTISEMENT

ಮಾಲೂರು: ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 14:40 IST
Last Updated 18 ಜೂನ್ 2024, 14:40 IST
ರೈಲು
ರೈಲು   

ಮಾಲೂರು: ರೈಲಿಗೆ ಸಿಲುಕಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಪಟ್ಟಣದ ರೈಲ್ವೆ ಸೇತುವೆ ಬಳಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿಯ ಅರಳೇರಿ ಗ್ರಾಮದ ಸಂಧ್ಯಾ (22) ಮೃತ ಯುವತಿ ಎಂದು ಗುರುತಿಸಲಾಗಿದೆ.

ಪಟ್ಟಣದ ಕೂರಂಡಹಳ್ಳಿ ಕೈಗಾರಿಕಾ ಪ್ರಾಂಗಣದಲ್ಲಿರುವ ಫ್ಲಿಪ್‌ಕಾರ್ಟ್‌ನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮಂಗಳವಾರ ಕೆಲಸಕ್ಕೆ ತೆರಳಿದ್ದ ಸಂಧ್ಯಾ ರೈಲ್ವೆ ಸೇತುವೆ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.