ಕೊಪ್ಪಳ: ತುಂಗಭದ್ರಾ ಆಣೆಕಟ್ಟೆಯ ಗೇಟ್ ಸಂಖ್ಯೆ 19ರಲ್ಲಿ ಲಿಂಕ್ ತುಂಡಾಗಿರುವ ಕಾರಣ ಜಿಲ್ಲೆಯ ನದಿಪಾತ್ರದ ಗ್ರಾಮಗಳ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ನದಿಪಾತ್ರದ ವ್ಯಾಪ್ತಿಗೆ ಗಂಗಾವತಿ ಹಾಗೂ ಕಾರಟಗಿ ತಾಲ್ಲೂಕುಗಳ ಹಲವು ಗ್ರಾಮಗಳು ಬರುತ್ತವೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಸಹಾಯಕ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್. ಅರಸಿದ್ಧಿ ಸೇರಿದಂತೆ ಹಲವರು ಜಲಾಶಯದ ಬಳಿಯೇ ಮೊಕ್ಕಾಂ ಹೂಡಿದ್ದಾರೆ.
ತಡರಾತ್ರಿ ಲಿಂಕ್ ತುಂಡಾಗಿರುವುದರಿಂದ ಮತ್ತು ಕತ್ತಲು ಇರುವ ಕಾರಣ ಭಾರಿ ಪ್ರಮಾಣದಲ್ಲಿ ನೀರು ಜಲಾಶಯದಿಂದ ಹೊರಹೋಗುತ್ತಿದ್ದು, ನದಿಪಾತ್ರದ ಜನರಲ್ಲಿ ಆತಂಕ ಮೂಡಿದೆ.
ಶಾಸಕ ಹಿಟ್ನಾಳ ಹಿಟ್ನಾಳ ಜಲಸಂಪನ್ಮೂಲ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆಗೂ ಇದರ ಬಗ್ಗೆ ದೂರವಾಣಿಯಲ್ಲಿ ಚರ್ಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.