ADVERTISEMENT

ಕಾರಟಗಿ | ಶಿಕ್ಷಕರ ದಿನಾಚರಣೆ: ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 14:29 IST
Last Updated 6 ಸೆಪ್ಟೆಂಬರ್ 2024, 14:29 IST
ಕಾರಟಗಿ ಭಾಗದ ನಾಲ್ವರು ಶಿಕ್ಷಕರಾದ ಗೀತಾಬಾಯಿ, ಜಯಲಕ್ಷ್ಮೀ, ರಾಮಣ್ಣ ಹಾಗೂ ಅಲಿಹುಸೇನ ಅವರಿಗೆ ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು
ಕಾರಟಗಿ ಭಾಗದ ನಾಲ್ವರು ಶಿಕ್ಷಕರಾದ ಗೀತಾಬಾಯಿ, ಜಯಲಕ್ಷ್ಮೀ, ರಾಮಣ್ಣ ಹಾಗೂ ಅಲಿಹುಸೇನ ಅವರಿಗೆ ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು   

ಕಾರಟಗಿ:‌ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದಿಂದ ಈ ಭಾಗದ ಇಬ್ಬರು ನಿವೃತ್ತ ಹಾಗೂ ಅನುದಾನಿತ, ಸರ್ಕಾರಿ ಶಾಲೆಯ ತಲಾ ಒಬ್ಬ ಶಿಕ್ಷಕರಿಗೆ ಗುರುವಾರ ಶಿಕ್ಷಕರ ದಿನಾಚರಣೆಯ ನಿಮಿತ್ತ ರಾಜೀವಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲೆಯ ದೇವಿಕ್ಯಾಂಪ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಗೀತಾಬಾಯಿ, ಗಂಗಾವತಿಯ ಬಿಷಪ್‌ ಹೋಗನ್ ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಯಲಕ್ಷ್ಮಿ, ನಿವೃತ್ತ ಶಿಕ್ಷಕರಾದ ರಾಮಣ್ಣ ಹಾಗೂ ಅಲಿಹುಸೇನ ಅವರು ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾದರು.

ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ, ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಬುರ್ಲೆ, ಕೊಪ್ಪಳ ಜಿಲ್ಲಾ ಕೆಪಿಸಿಸಿ ಶಿಕ್ಷಕ ಘಟಕದ ಅಧ್ಯಕ್ಷ ಯಂಕಪ್ಪ, ಕಾರಟಗಿ ತಾಲ್ಲೂಕು ಘಟಕದ ಅಧ್ಯಕ್ಷ ಅಲಿಹುಸೇನ, ಗಂಗಾವತಿ ತಾಲ್ಲೂಕು ಅಧ್ಯಕ್ಷ ರಾಮಣ್ಣ ಸಹಿತ ಅನೇಕರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.