ಅಳವಂಡಿ: ಗ್ರಾಮದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳೂರಿನ ಡೆವಲೆಪ್‌ಮೆಂಟ್ ಎಜುಕೇಶನ್ ಸೊಸೈಟಿ, ಕರ್ನಾಟಕ ಆರೋಗ್ಯ ಸೇವಾ ಪ್ರತಿಷ್ಠಾನ , ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾಗೃತಿ ಮೂಡಿಸುವ ಕಾರ್ಯಕ್ರಮನಡೆಯಿತು.
ಸಂಪನ್ಮೂಲ ವ್ಯಕ್ತಿ ವಿರೇಶ ಹಾಲಗುಂದಿ ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ, ಲಿಂಗ ಸಮಾನತೆ , ಕೌಟುಂಬಿಕ ದೌರ್ಜನ್ಯ ತಡೆ ಕಾನೂನು, ಬಾಲ್ಯವಿವಾಹಕ್ಕೆ ಕಾರಣಗಳು ಮತ್ತು ದುಷ್ಪರಿಣಾಮಗಳು ಬಗ್ಗೆ ಮಕ್ಕಳ ಅಪರಾಧಗಳ ರಕ್ಷಣಾ ಕಾಯ್ದೆ 2012 ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿ ವಿರೇಶ ಹಾಲಗುಂದಿ, ಸಿದ್ದಲಿಂಗಮ್ಮ ಹಾಲಗುಂದಿ, ರೇಖಾ ಕಣವಿ ಹಾಗೂ ಮಕ್ಕಳು, ಮಹಿಳೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.