ADVERTISEMENT

ಜಿಲ್ಲಾಡಳಿತದಿಂದ ಮಹನೀಯರ ಜಯಂತಿ ಆಚರಣೆ

ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ, ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 10 ಮೇ 2024, 16:09 IST
Last Updated 10 ಮೇ 2024, 16:09 IST
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಬಸವ ಜಯಂತಿ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಬಸವ ಜಯಂತಿ ಮತ್ತು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು   

ಕೊಪ್ಪಳ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್‌ ಅತುಲ್‌, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ರತ್ನಂ ಪಾಂಡೆಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಸೇರಿದಂತೆ ಅನೇಕರು ಮಹನೀಯರ ಭಾವಚಿತ್ರಗಳಿಗೆ ಗೌರವ ಸಲ್ಲಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಪ್ರಭು ಹೆಬ್ಬಾಳ, ಮುಖಂಡರಾದ ಶರಣಪ್ಪ ವಕೀಲರು, ವಿರೂಪಣ್ಣ ನವೋದಯ, ಹೇಮರೆಡ್ಡಿ ಕೆಂಚರೆಡ್ಡಿ, ಮನೋಹರ, ಶಿವರೆಡ್ಡಿ, ಶಂಕರಗೌಡ ಹಿರೇಗೌಡ್ರ, ಸುರೇಶ ಪಾಲ್ಗೊಂಡಿದ್ದರು.

ADVERTISEMENT

ಬಸವ ಜಯಂತಿ ಪ್ರಯುಕ್ತ ನಗರದ ಹೊಸಪೇಟೆ ರಸ್ತೆಯಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿರುವ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿ ಮಾಲಾರ್ಪಣೆ ಮಾಡಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಕೊಪ್ಪಳ ತಾಲ್ಲೂಕು ಪಂಚಾಯಿತಿ ಇಒ ವಿಠ್ಠಲ ಚೌಗುಲ್, ಇಒ ದುಂದಪ್ಪ ತುರಾದಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ ಕಣವಿ, ಸಮಾಜದ ಮುಖಂಡ ಬಸವರಾಜ ಬಳ್ಳೊಳ್ಳಿ ಭಾಗವಹಿಸಿದ್ದರು.

ಸರ್ಕಾರಿ ಕಾಲೇಜು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಸವ ಜಯಂತಿ ಮತ್ತು ಹೇಮರಡ್ಡಿ ಮಲ್ಲಮ್ಮರವರ ಜಯಂತಿ ಆಚರಿಸಲಾಯಿತು.

ಪ್ರಾಚಾರ್ಯ ತಿಮ್ಮಾರೆಡ್ಡಿ ಮೇಟಿ ಮಾತನಾಡಿ ‘ಬಸವಣ್ಣನವರು 12 ನೇ ಶತಮಾನದಲ್ಲಿ ವಚನ ಚಳವಳಿ ಮೂಲಕ ಸಮಾಜ ಸುಧಾರಣೆ ಬಯಸಿ ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದರು. ಸಮಾನತೆಯ ಸಮಾಜ ಕಟ್ಟುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಶರಣೆ ಹೇಮರೆಡ್ಡಿ ಮಲ್ಲಮ್ಮ ಮಹಾ ಸಾದ್ವಿಯಾಗಿ ಸಾಂಸಾರಿಕ ತೊಂದರೆಯನ್ನು ಮೆಟ್ಟಿನಿಂತು ಭಕ್ತಿಯ ಮಾರ್ಗದಿಂದ ಶ್ರೀಶೈಲದ ಮಲ್ಲಿಕಾರ್ಜುನನ್ನು ಕಂಡು ವರ ಪಡೆದವರು’ ಎಂದು ಸ್ಮರಿಸಿದರು.

ಕನ್ನಡ ಉಪನ್ಯಾಸಕ ಮಹಾಂತೇಶ ನೆಲಾಗಣಿ, ಸಿಬ್ಬಂದಿ ನಿಂಗಪ್ಪ ಕೆ., ಹಸನಸಾಬ್ ಪಾಲ್ಗೊಂಡಿದ್ದರು.

ರಕ್ತದಾನ: ತಾಲ್ಲೂಕಿನ ಕಲ್ಲತಾವರಗೇರಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ ಜರುಗಿತು.

ಕೊಪ್ಪಳದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಸವ ಜಯಂತಿ ಮತ್ತು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು
ಕೊಪ್ಪಳ ತಾಲ್ಲೂಕಿನ ಕಲ್ಲತಾವರಗೇರಿ ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದವರಿಗೆ ಪ್ರಮಾಣ ಪತ್ರ ನೀಡಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.