ಕೊಪ್ಪಳ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರದ್ದು ಪಡಿಸಿರುವುದನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಮೊದಲ ದಿನ ಬೇಡಿಕೆ ಈಡೇರದ ಕಾರಣ ಸತ್ಯಾಗ್ರಹ ನಡೆಸುತ್ತಿರುವ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಯೇ ಮಲಗಿದರು.
‘ರಾಜ್ಯ ಸರ್ಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಕೊಡುತ್ತಿದ್ದ ಯೋಜನೆಯನ್ನು ಕಳೆದ ತಿಂಗಳು ರದ್ದು ಮಾಡಿದೆ. ಪುನಃ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕವಾಗಿ ಹೇಳಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶವಾಗುವ ತನಕ ಉಪವಾಸ ಸತ್ಯಾಗ್ರಹ ಕೈಬಿಡುವುದಿಲ್ಲ’ ಎಂದು ಹೇಳಿದರು.
ಬರ ಅಧ್ಯಯನ ಪ್ರವಾಸಕ್ಕಾಗಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಂಗಳವಾರ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.